
ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಕ್ರೈಸ್ ಕಿಂಗ್ ಆಂಗ್ಲ ಮಾಧ್ಯಮ ಶಾಲೆ, ಕಾರ್ಕಳ ಇವರ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳು ಕುಮಾರಿ ಶ್ರಾವಣಿ, ಅದಿತಿ, ಪ್ರೀಮಾ, ಪ್ರತೀಕ್ಷಾ, ಸಮೃದ್ಧಿ, ಪ್ರೇಕ್ಷಾ, ಆಂಚಲ್, ಸಿಯಾ, ಖುಷಿ, ಮನಸ್ವಿ, ರಿಹಾ, ಅಪೂರ್ವ, ಆನ್ಯ, ಅಕೃತಿ ಇವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರನ್ನು ಶಾಲಾ ಅಧ್ಯಕ್ಷರು, ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ಆಡಳಿತ ಮಂಡಳಿಯ ಸದಸ್ಯರು ಹಾಗೂ ದೈಹಿಕ ಶಿಕ್ಷಕರು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದರು.






























































































































