
ಕರ್ನಾಟಕ ಸರ್ಕಾರವು ನಮ್ಮ ಹೆಮ್ಮೆಯ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಿರುವ ಹಿನ್ನೆಲೆಯಲ್ಲಿ ತುಳು ಧ್ವಜ ಪ್ರದರ್ಶಿಸಿ ಗೌರವ ಸಲ್ಲಿಸುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು. ಈ ನಿಟ್ಟಿನಲ್ಲಿ ಶ್ರಮಿಸಿದ ಮುಖ್ಯಮಂತ್ರಿಗಳಾದ ಮಾನ್ಯ ಡಿ.ಕೆ. ಶಿವಕುಮಾರ್, ಉಭಯ ಜಿಲ್ಲೆಗಳ ಶಾಸಕರುಗಳಿಗೆ, ಜೈ ತುಳುನಾಡು ಸಂಘಟನೆ ಹಾಗೂ ಇತರರಿಗೆ ಧನ್ಯವಾದಗಳನ್ನು ಸಲ್ಲಿಸಲಾಯಿತು.
ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು ಸುಮಾರು 2000+ ವರ್ಷಗಳ ಇತಿಹಾಸವಿರುವ ತುಳು ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ, ಅದು ನಮ್ಮ ಗುರುತು, ಇತಿಹಾಸ, ಉಸಿರು ಮತ್ತು ಸಂಸ್ಕೃತಿ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಮುಂದಿನ ದಿನಗಳಲ್ಲಿ ಸೌಹಾರ್ದ ಫ್ರೆಂಡ್ಸ್ ವತಿಯಿಂದ ತುಳು ಭಾಷೆ ಮತ್ತು ಸಂಸ್ಕೃತಿಯ ರಕ್ಷಣೆಗೆ ಪೂರಕವಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಭಾಸ್ಕರ ಆಚಾರ್ಯ, ನೂತನ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಆಚಾರ್ಯ, ನಿಕಟಪೂರ್ವ ಅಧ್ಯಕ್ಷರಾದ ಪ್ರಜ್ವಲ್ ಜೈನ್, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ಹಾಗೂ ಇತರ ಹಿರಿಯರು ಮತ್ತು ಸದಸ್ಯರು ಉಪಸ್ಥಿತರಿದ್ದರು.






























































































































