31.6 C
Udupi
Friday, May 29, 2026
spot_img
spot_img
HomeBlogತ್ವಿಶಾ ಶರ್ಮಾ ಸಾವು ಪ್ರಕರಣ: ಅತ್ತೆ ಗಿರಿಬಾಲ ಸಿಂಗ್ ಬಂಧನ

ತ್ವಿಶಾ ಶರ್ಮಾ ಸಾವು ಪ್ರಕರಣ: ಅತ್ತೆ ಗಿರಿಬಾಲ ಸಿಂಗ್ ಬಂಧನ

ಭೋಪಾಲ್: ನಟಿ ಹಾಗೂ ಮಾಡೆಲ್ ತ್ವಿಶಾ ಶರ್ಮಾ ಸಾವಿನ ಪ್ರಕರಣದಲ್ಲಿ ಅವರ ಅತ್ತೆ ಗಿರಿಬಾಲ ಸಿಂಗ್ ಅವರನ್ನು ಸಿಬಿಐ ಗುರುವಾರ ಬಂಧಿಸಿದೆ. ಮಧ್ಯಪ್ರದೇಶ ಹೈಕೋರ್ಟ್ ಅವರು ಪಡೆದಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಿದ ಕೆಲವೇ ಗಂಟೆಗಳಲ್ಲಿ ಈ ಬಂಧನ ನಡೆದಿದೆ.

33 ವರ್ಷದ ತ್ವಿಶಾ ಶರ್ಮಾ ಅವರು ಮೇ 12ರಂದು ಭೋಪಾಲ್‌ನಲ್ಲಿರುವ ಪತಿಯ ಮನೆಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆಯನ್ನು ಇತ್ತೀಚೆಗೆ ಸಿಬಿಐ ವಹಿಸಿಕೊಂಡಿದ್ದು, ತನಿಖೆಯನ್ನು ವೇಗಗೊಳಿಸಿದೆ.

ಗುರುವಾರ ಬೆಳಗ್ಗೆ ಸಿಬಿಐ ಅಧಿಕಾರಿಗಳ ತಂಡ ಗಿರಿಬಾಲ ಸಿಂಗ್ ನಿವಾಸಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿ ಇದೇ ವೇಳೆ ಮನೆಯ ಡಿಜಿಟಲ್ ಮ್ಯಾಪಿಂಗ್ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣದ ತನಿಖೆಗಾಗಿ ಭೋಪಾಲ್‌ನಲ್ಲಿ ತಾತ್ಕಾಲಿಕ ಕಚೇರಿ ತೆರೆಯಲು ಸಿಬಿಐ ಮುಂದಾಗಿದ್ದು ದಾಖಲೆಗಳು ಹಾಗೂ ಸಾಕ್ಷ್ಯಗಳನ್ನು ಸುರಕ್ಷಿತವಾಗಿ ಸಂಗ್ರಹಿಸಲು ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page