
ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ (ರಿ) ಕಲ್ಚರಲ್ ಅಂಡ್ ರಿಕ್ರಿಯೇಷನ್ ಕ್ಲಬ್ ಹಾಗೂ ಬೈಕಾಡಿ ಸಾಲ್ಟೋ ಡೋರೇ ನೊರೋಹ್ನ ಮೆಮೋರಿಯಲ್ ಸ್ವಿಮ್ಮಿಂಗ್ ಪೂಲ್ ಇವರ ಸಹಯೋಗದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ, ಕಾರ್ಕಳ ಇಲ್ಲಿನ ವಿದ್ಯಾರ್ಥಿಯಾದ ಶಾಂತನು ಕುಡ್ವಾ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.
ಇವರನ್ನು ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿ ಯವರು, ಶಾಲಾ ಆಡಳಿತ ಮಂಡಳಿ ಸದಸ್ಯರು , ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.




































