
ಉಡುಪಿ : ಅಂಬಲಪಾಡಿ ಸಮೀಪದ ಬಿ.ಆರ್ ಮೆಡೋಸ್ ಅಪಾರ್ಟ್ಮೆಂಟ್ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ವೃತರನ್ನು ಸಾಯಿರಾಜ್ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಚಿನ್ ಶೆಟ್ಟಿ ( 44) ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

























































