
ಉಡುಪಿ: ಸನಾತನ ಸಂಸ್ಥೆಯ ವತಿಯಿಂದ ಉಡುಪಿಯಲ್ಲಿ ಪ್ರಥಮ ಬಾರಿಗೆ ಆಯೋಜಿಸಲಾಗುತ್ತಿರುವ ‘ಶ್ರೀ ಮಹಾಧನ್ವಂತರಿ ಯಾಗ’ದ ಪ್ರಚಾರ ಹಾಗೂ ಪೂರ್ವಸಿದ್ಧತೆಗಳಿಗಾಗಿ ಪೇಜಾವರ ಮಠದ ಹಿಂಭಾಗದಲ್ಲಿ ನೂತನ ಕಾರ್ಯಾಲಯ ಆರಂಭವಾಗಲಿದ್ದು ನವೆಂಬರ್ 9 ರಂದು ಸಂಜೆ 4 ಗಂಟೆಗೆ ಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (ಪೇಜಾವರ ಮಠ) ಇವರ ಅಮೃತಹಸ್ತದಿಂದ ಕಾರ್ಯಾಲಯದ ಉದ್ಘಾಟನೆ ನೆರವೇರಲಿದೆ” ಎಂದು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಯೋಜನ ಸಮಿತಿಯ ಸಂಚಾಲಕರಾದ ಗುರುಪ್ರಸಾದ್ ಗೌಡ ಇವರು ತಿಳಿಸಿದರು.
ಕಾರ್ಯಕ್ರಮದ ಸಿದ್ಧತೆಯ ಕುರಿತು ಮಾತನಾಡಿದ ವಿಜಯ ಕೊಡವೂರು ಅವರು, “ಲೋಕಕಲ್ಯಾಣ ಹಾಗೂ ಸಾರ್ವಜನಿಕರ ಆರೋಗ್ಯ ವೃದ್ಧಿಯ ಸಂಕಲ್ಪದೊಂದಿಗೆ ಹಮ್ಮಿಕೊಳ್ಳಲಾಗಿರುವ ಈ ಮಹಾಯಾಗಕ್ಕೆ ಈಗಾಗಲೇ ವಿವಿಧ ಸಂಘ-ಸಂಸ್ಥೆಗಳಿಗೆ ಭೇಟಿ ನೀಡಿ ಸಾರ್ವಜನಿಕರನ್ನು ಆಮಂತ್ರಿಸಲಾಗುತಿದ್ದು ಈ ಕಾರ್ಯವು ಮತ್ತಷ್ಟು ಚುರುಕುಗೊಳ್ಳಲಿದೆ,” ಎಂದರು.
ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸಂತರಾದ ಪೂಜ್ಯನೀಯ ರಮಾನಂದ ಗೌಡ, ಸ್ವಾಗತ ಸಮಿತಿಯ ಸಂಘಟನಾ ಕಾರ್ಯದರ್ಶಿ ವಿಜಯ ಕೊಡವೂರು ಮತ್ತು ಆಯೋಜನಾ ಸಮಿತಿಯ ಸಂಚಾಲಕರಾದ ಗುರುಪ್ರಸಾದ್ ಗೌಡ, ಸ್ವಾಗತ ಸಮಿತಿಯ ಶ್ರೀನಿವಾಸ ಇವರು ಉಪಸ್ಥಿತರಿದ್ದರು.

















































