
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ವಿಕಾಸ ಪದವಿ ಪೂರ್ವ ಕಾಲೇಜು ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಎಸ್.ವಿ.ಟಿ ಪದವಿಪೂರ್ವ ಕಾಲೇಜು ಕಾರ್ಕಳ ಇಲ್ಲಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಭುವನೇಶ್ವರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸಾಧನೆಗೈದ ಭುವನೇಶ್ವರಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು , ಹಿರಿಯ ಸಹ ಶಿಕ್ಷಕರು, ಶಿಕ್ಷಕ ಮತ್ತು ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ.































































































































