
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಸಿಐಡಿ ಕ್ಲೀನ್ಚಿಟ್ ನೀಡಿದೆ. ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಸಿಐಡಿ ಅಧಿಕಾರಿಗಳು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಅಂತಿಮ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.
ದೋಷಾರೋಪ ಪಟ್ಟಿಯಲ್ಲಿ ಬಿ. ನಾಗೇಂದ್ರ ಹಾಗೂ ನಿಗಮದ ಅಂದಿನ ಅಧ್ಯಕ್ಷ ಬಸವರಾಜ್ ದದ್ದಲ್ ಅವರನ್ನು ಪ್ರಮುಖ ಸಾಕ್ಷಿಗಳೆಂದು ಹೆಸರಿಸಲಾಗಿದೆ. ನಿಗಮದ ಹಣ ದುರುಪಯೋಗದಲ್ಲಿ ನಾಗೇಂದ್ರ ಅವರ ಪಾತ್ರವಿಲ್ಲ ಎಂಬುದು ತನಿಖೆಯಲ್ಲಿ ತಿಳಿದುಬಂದ ಹಿನ್ನೆಲೆಯಲ್ಲಿ ಅವರನ್ನು ಆರೋಪಿಗಳ ಪಟ್ಟಿಯಿಂದ ಕೈಬಿಡಲಾಗಿದೆ.
ಇನ್ನು ನಿಗಮದ ಅಂದಿನ ವ್ಯವಸ್ಥಾಪಕ ನಿರ್ದೇಶಕ ಪರುಶರಾಮ್, ನೆಕ್ಕುಂಟಿ ನಾಗರಾಜ್ ಮತ್ತು ಸತ್ಯನಾರಾಯಣ ವರ್ಮ ಅವರನ್ನು ಪ್ರಕರಣದ ಪ್ರಮುಖ ಆರೋಪಿಗಳೆಂದು ಗುರುತಿಸಲಾಗಿದೆ. ಸಿಐಡಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದೆ.

























































































