
ರೋಟರಿ ಜಿಲ್ಲೆ 3192 ರೋಟರಿ ಬೆಂಗಳೂರು ಗ್ಲೋಬಲ್ ಯೋಗ ವತಿಯಿಂದ ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಯೋಗ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀಮತಿ ಮಮತಾ ಗಣೇಶ್ ಅವರನ್ನು ಯೋಗ ಕ್ಷೇತ್ರದಲ್ಲಿನ ಅವರ ಅಮೂಲ್ಯ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವರ್ಧಮಾನ ಶಿಕ್ಷಣ ಸಂಸ್ಥೆಯಲ್ಲಿ ಯೋಗ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿದ್ಯಾರ್ಥಿಗಳಲ್ಲಿ ಯೋಗದ ಮಹತ್ವವನ್ನು ಅರಿವು ಮೂಡಿಸುವುದರ ಜೊತೆಗೆ ದೈಹಿಕ ಆರೋಗ್ಯ, ಮಾನಸಿಕ ಸಮತೋಲನ ಹಾಗೂ ಶಿಸ್ತಿನ ಜೀವನದ ಮಹತ್ವವನ್ನು ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದಾರೆ.
ಇವರ ಮಾರ್ಗದರ್ಶನದಲ್ಲಿ ವರ್ಧಮಾನ ಶಿಕ್ಷಣ ಸಂಸ್ಥೆಯ ಹಲವಾರು ವಿದ್ಯಾರ್ಥಿಗಳು ರಾಜ್ಯಮಟ್ಟ ಹಾಗೂ ರಾಷ್ಟ್ರಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.






















