30.4 C
Udupi
Sunday, October 11, 2026
spot_img
spot_img
HomeBlogವಿದ್ಯಾರ್ಥಿಗಳಿಗೆ ಪೊಲೀಸ್ ಜಾಗೃತಿ ಕಾರ್ಯಕ್ರಮ

ವಿದ್ಯಾರ್ಥಿಗಳಿಗೆ ಪೊಲೀಸ್ ಜಾಗೃತಿ ಕಾರ್ಯಕ್ರಮ

ಬೈಲೂರು ನಚಿಕೇತ ವಿದ್ಯಾ ಸಂಸ್ಥೆ

ಬೈಲೂರು ನಚೀಕೇತ ಶಾಲಾ ವಿದ್ಯಾರ್ಥಿಗಳಲ್ಲಿ ಸುರಕ್ಷತೆ ಹಾಗೂ ಜಾಗೃತಿಯ ಅರಿವು ಮೂಡಿಸುವ ಉದ್ದೇಶದಿಂದ ಇಂದು ಶಾಲೆಯಲ್ಲಿ ಪೊಲೀಸ್ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಹೆಡ್ ಕಾನ್ಸ್‌ಟೇಬಲ್ ಸಂತೋಷ್ ಕಾರ್ಕಳರವರು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ , ವೈಯಕ್ತಿಕ ಸುರಕ್ಷತೆ, ಯಾವುದೇ ತೊಂದರೆ ಎದುರಾದಾಗ ದೂರು ನೀಡುವ ವಿಧಾನ ಹಾಗೂ ಶಾಲೆಯಲ್ಲಿ ಮತ್ತು ಶಾಲೆಯ ಹೊರಗೆ ಪಾಲಿಸಬೇಕಾದ ಸೂಕ್ತ ನಡವಳಿಕೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಅಲ್ಲದೆ, ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪರಿಸರದ ಬಗ್ಗೆ ಸದಾ ಎಚ್ಚರಿಕೆಯಿಂದಿರಬೇಕು. ಯಾವುದೇ ರೀತಿಯ ಸಮಸ್ಯೆ ಅಥವಾ ತೊಂದರೆ ಎದುರಾದಾಗ ಭಯಪಡದೆ ಪೊಲೀಸ್ ಇಲಾಖೆ ಸಹಾಯವನ್ನು ಪಡೆಯಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ತಮ್ಮ ಸುರಕ್ಷತೆಯ ಬಗ್ಗೆ ಅಗತ್ಯವಾದ ಅರಿವು ಮತ್ತು ಜಾಗೃತಿ ಮೂಡಿಸಲಾಯಿತು.
ವಿದ್ಯಾಲಯದ ಮುಖ್ಯೊಪಾಧ್ಯಾಯಿನಿ ಚಂದ್ರಿಕಾ ದಿವಾಕರ್ ದನ್ಯವಾದವಿತ್ತರು. ಸಹಶಿಕ್ಷಕ ವಿರಾಜ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page