34.7 C
Udupi
Wednesday, November 25, 2026
spot_img
spot_img
HomeBlogವಿನಯ್ ಕುಲಕರ್ಣಿಗೆ ಸುಪ್ರೀಂ ಶಾಕ್ ..!

ವಿನಯ್ ಕುಲಕರ್ಣಿಗೆ ಸುಪ್ರೀಂ ಶಾಕ್ ..!

ಜಾಮೀನು ರದ್ದು, 2 ವಾರದಲ್ಲಿ ಶರಣಾಗತಿಗೆ ಆದೇಶ!

ನವದೆಹಲಿ: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ದೊಡ್ಡ ಹಿನ್ನಡೆ ನೀಡಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಷರತ್ತುಬದ್ಧ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಎರಡು ವಾರಗಳೊಳಗೆ ನ್ಯಾಯಾಲಯದ ಮುಂದೆ ಶರಣಾಗುವಂತೆ ಸೂಚಿಸಿದೆ. ಇದರಿಂದ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದಲೂ ಅನರ್ಹರಾಗಿದ್ದಾರೆ.

ಹೈಕೋರ್ಟ್ ನೀಡಿದ್ದ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶ ಪ್ರಶ್ನಿಸಿ ಸಿಬಿಐ ಹಾಗೂ ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಎಸ್‌ಎಲ್‌ಪಿ ಮೂಲಕ ಸಲ್ಲಿಸಲಾದ ಕ್ರಿಮಿನಲ್ ಮೇಲ್ಮನವಿಯಲ್ಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಅಲ್ಲದೆ, ಆರೋಪಿಗಳಿಗೆ ನೀಡಲಾಗಿದ್ದ ಜಾಮೀನು ಬಾಂಡ್‌ಗಳನ್ನು ರದ್ದುಪಡಿಸಿ, ಎರಡು ವಾರಗಳೊಳಗೆ ಸಂಬಂಧಪಟ್ಟ ನ್ಯಾಯಾಲಯದ ಮುಂದೆ ಶರಣಾಗುವಂತೆ ನಿರ್ದೇಶನ ನೀಡಿದೆ.

2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಜಿಮ್‌ನಲ್ಲಿ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದ ಪ್ರಕರಣವನ್ನು ಬಳಿಕ ಸಿಬಿಐಗೆ ವಹಿಸಲಾಗಿತ್ತು. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿದ್ದು, ಇದರ ಹಿಂದೆ ಸಂಚು ಇದೆ ಎಂದು ಸಿಬಿಐ ಆರೋಪಿಸಿತ್ತು. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದರು.

2026ರ ಏಪ್ರಿಲ್‌ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಜುಲೈ 31ರಂದು ಕರ್ನಾಟಕ ಹೈಕೋರ್ಟ್ ಶಿಕ್ಷೆಗೆ ತಡೆ ನೀಡಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಗುರುನಾಥ್ ಗೌಡ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅಕ್ಟೋಬರ್ 27ರಂದು ಎರಡೂ ಕಡೆಯ ವಾದ ಆಲಿಸಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಜಾಮೀನು ರದ್ದುಗೊಳಿಸುವ ಮೂಲಕ ಅಂತಿಮ ಆದೇಶ ಪ್ರಕಟಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page