29 C
Udupi
Friday, October 30, 2026
spot_img
spot_img
HomeBlogಯಶೋಧ ಪಿ.ನಾಯಕ್ ಅಂಡಾರು, ಕ್ರೀಡಾ ಕ್ಷೇತ್ರದ ಸಾಧನೆಗಾಗಿ ರಾಷ್ಟ್ರಮಟ್ಟದ ಉತ್ತಮ ಸಾಧಕಿ ಪ್ರಶಸ್ತಿ

ಯಶೋಧ ಪಿ.ನಾಯಕ್ ಅಂಡಾರು, ಕ್ರೀಡಾ ಕ್ಷೇತ್ರದ ಸಾಧನೆಗಾಗಿ ರಾಷ್ಟ್ರಮಟ್ಟದ ಉತ್ತಮ ಸಾಧಕಿ ಪ್ರಶಸ್ತಿ

ಮಂಗಳೂರಿನ ಶ್ರೀ ರಾಮಕೃಷ್ಣ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಯಶೋಧ. ಪಿ ನಾಯಕ್ ಅಂಡಾರು,ಕಾರ್ಕಳ ತಾಲೂಕು ಇವರಿಗೆ ಮ್ಯಾಜಿಕ್ ಬುಕ್ ಆಫ್ ರೆಕಾರ್ಡ್ ಫೌಂಡೇಷನ್ ಸಂಸ್ಥೆಯು ಶಿಕ್ಷಣ ಕ್ಷೇತ್ರದಲ್ಲಿ ಅಪ್ರತಿಮ ಸೇವೆ ಸಲ್ಲಿಸುತ್ತಿರುವ ಗುರುಗಳನ್ನು ಗೌರವಿಸಿ ನೀಡುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ (Best Teacher / Educator Award) ಯನ್ನು ನೀಡಿ ಗೌರವಿಸಿದೆ.

ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು ಕ್ರೀಡಾಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಹಾಗೂ ರಾಷ್ಟ್ರ ಮಟ್ಟದಲ್ಲಿ ಸ್ಪೋರ್ಟ್, ಪೊಯೆಟ್ರಿ ಅಂಡ್ ಲಿಟರೇಚರ್ ನಲ್ಲಿ ಉತ್ತಮ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಇವರ ಮಾರ್ಗದರ್ಶನದಲ್ಲಿ ಹಲವಾರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಸಾಧನೆಯನ್ನು ಮಾಡಿದ್ದಾರೆ.ಇವರು ಉತ್ತಮ ಸಮಾಜ ಸೇವಕಿಯಾಗಿದ್ದು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಹನಿಗವನ,ನಾಟಕ,ಸಣ್ಣಕಥೆ ಲೇಖನಗಳನ್ನು ಬರೆಯುತ್ತಾ, ಸಾಹಿತ್ಯದ ಒಲವನ್ನು ಬೆಳೆಸಿಕೊಂಡಿದ್ದಾರೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಬುಲ್ ಬುಲ್ ವಿಭಾಗದಲ್ಲಿ ಇವರ ಮಾರ್ಗದರ್ಶನದಲ್ಲಿ ಸುಮಾರು ಇಪ್ಪತ್ತೈದಕ್ಕೂ ಹೆಚ್ಚು ವಿದ್ಯಾರ್ಥಿಗಳು ” ಗೋಲ್ಡನ್ ಆರೋ (Golden arrow) ರಾಷ್ಟ್ರಪ್ರಶಸ್ತಿಯನ್ನು ಗಳಿಸಿರುತ್ತಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page