
ಕಾರ್ಕಳ :ಯುವಶಕ್ತಿ ಸಮೂಹ ಸಂಸ್ಥೆಗಳ ವತಿಯಿಂದ ಯುವಶಕ್ತಿ ಆಂಗ್ಲ ಮಾಧ್ಯಮ ಶಾಲೆ, ಕಾರ್ಕಳದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ದೇಶಭಕ್ತಿಯ ಸಂಭ್ರಮದೊಂದಿಗೆ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಶ್ರೀಧರ್ ಪೂಜಾರಿ, ಉದ್ಯಮಿಗಳು, ಬ್ರಹ್ಮಾವರ ಇವರು ಧ್ವಜಾರೋಹಣ ನೆರವೇರಿಸಿದರು. ನಂತರ ರಾಷ್ಟ್ರಗೀತೆ ಗಾಯನದೊಂದಿಗೆ ಕಾರ್ಯಕ್ರಮಕ್ಕೆ ಗೌರವ ಸಲ್ಲಿಸಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶಬ್ಬೀರ್ ಹಸನ್ ಹಾಗೂ ಸತೀಶ್ ಆಚಾರ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ತಾಂತ್ರಿಕ ಸಹಾಯಕರು, DCF, ಕುದುರೆಮುಖ ವನ್ಯಜೀವಿ ವಿಭಾಗ ಇವರು ಆಗಮಿಸಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು.
ಈ ಸಂದರ್ಭದಲ್ಲಿ ಯುವಶಕ್ತಿ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ವಿಜಯ್ ಶೆಟ್ಟಿ, ಯುವಶಕ್ತಿ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ಅಬ್ದುಲ್ ಖಾಲಿಕ್, ಶಾಲೆಯ ಮುಖ್ಯೋಪಾಧ್ಯಾಯರಾದ ನಳಿನಾಕ್ಷಿ ಹೆಗ್ಡೆ, ಯುವಶಕ್ತಿ ಎಜುಕೇಶನ್ ಸೊಸೈಟಿಯ ನಿರ್ದೇಶಕರಾದ ನವೀನ್ ಸುವರ್ಣ, ಯುವಶಕ್ತಿ ಯೂತ್ ಕ್ಲಬ್‌ನ ಅಧ್ಯಕ್ಷರಾದ ವೆಂಕಟೇಶ್ ಹಾಗೂ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಚೇತನ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿಯರು, ವಿದ್ಯಾರ್ಥಿಗಳು, ಪೋಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಹೆಚ್ಚಿಸಿದರು. ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ರಾಷ್ಟ್ರಪ್ರೇಮ ಹಾಗೂ ಸ್ವಾತಂತ್ರ್ಯದ ಮಹತ್ವದ ಕುರಿತು ಅರಿವು ಮೂಡಿಸುವಂತಹ ಕಾರ್ಯಕ್ರಮಗಳು ನಡೆಯಿತು.ಶಾಲಾ ಶಿಕ್ಷಕಿಯಾದ ದಿವ್ಯ ಅವರು ಅತಿಥಿಗಳು ಹಾಗೂ ಗಣ್ಯರನ್ನು ಸ್ವಾಗತಿಸಿದರು. ಸೌಮ್ಯ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು.
ರೇಣುಕಾ ಅವರು ವಂದನಾರ್ಪಣೆ ಸಲ್ಲಿಸಿದರು.ಒಟ್ಟಾರೆ, ಯುವಶಕ್ತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯು ದೇಶಭಕ್ತಿ, ಶಿಸ್ತು, ಸಂಭ್ರಮ ಮತ್ತು ಏಕತೆಯ ಸಂದೇಶವನ್ನು ಸಾರುತ್ತಾ ಅತ್ಯಂತ ಯಶಸ್ವಿಯಾಗಿ ನೆರವೇರಿತು.













































































































