ಒಂದು ಲಕ್ಷಕ್ಕೂ, ಅಧಿಕ ಜನರ ಸಮ್ಮುಖದಲ್ಲಿ ಕಾರ್ಯಕ್ರಮ:
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೋಮವಾರ ವಿಕಾಸಸೌಧದಲ್ಲಿ ಬೆಂಗಳೂರು ಮತ್ತು ಮೈಸೂರು ವಿಭಾಗದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ್ದು, ಈ ವೇಳೆ ಮುಂಬರುವ ಅಕ್ಟೋಬರ್ ತಿಂಗಳಿಗೆ ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳು ಆರಂಭಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಸುವರ್ಣ ಮಹೋತ್ಸವ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಲಾಗಿದ್ದು ಸುವರ್ಣ ಮಹೋತ್ಸವವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲಾಗುವುದು. ಎಲ್ಲಾ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರು ಸೇರಿ ಒಂದು ಲಕ್ಷಕ್ಕೂ ಅಧಿಕ ಜನರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಸುವ ಉದ್ದೇಶ ಇದೆ. ಇಲಾಖೆಯ ಯೋಜನೆಗ ಳನ್ನು ಸಮರ್ಪಕವಾಗಿ ಜನತೆಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಈ ಮೂಲಕ ಇಲಾಖೆಯ ಪ್ರಗತಿಗೆ ಶ್ರಮಿಸಬೇಕು ಎಂದು ಹೇಳಿದರು.




















