
ಉಡುಪಿ: ಉಡುಪಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಾನು ಅಕ್ಕನ ಸ್ಥಾನದಲ್ಲಿ ನಿಂತು ಪ್ರತಾಪ್ ಸಿಂಹ ಮತ್ತು ಪ್ರದೀಪ್ ಈಶ್ವರ್‌ಗೆ ಕಿವಿಮಾತು ಹೇಳುತ್ತೇನೆ ಎಂದು ಕೀಳುಮಟ್ಟದ ಭಾಷೆ ಪ್ರಯೋಗಿಸಿ ಜಗಳವಾಡದಂತೆ ಸಲಹೆ ನೀಡಿದರು.
ನನ್ನ ವಿಚಾರದಲ್ಲೂ ಬಹಳಷ್ಟು ಅಪಮಾನಗಳನ್ನು ಅನುಭವಿಸಿದ್ದೇನೆ. ರಾಜಕಾರಣಿಗಳನ್ನು ಜನ ಗಮನಿಸುತ್ತಿದ್ದಾರೆ. ನಾವು ರೋಲ್ ಮಾಡೆಲ್ ಆಗಬೇಕೇ ಹೊರತು ನಾಚಿಕೆ ಆಗುವಂತೆ ವರ್ತಿಸಬಾರದು. ನಿಮ್ಮ ಆಚಾರ-ವಿಚಾರ ಭಾಷೆಯನ್ನು ಜನ ನೋಡ್ತಾರೆ. ನಿಮ್ಮ ತಂದೆ-ತಾಯಿಯನ್ನು ಎಳ್ಕೊಂಡು ಬರುವುದು ಸರಿಯಲ್ಲ, ಇಲ್ಲಿಗೆ ಬಿಟ್ಟುಬಿಡಿ. ಇಬ್ಬರು ಬುದ್ಧಿವಂತರಿದ್ದೀರಿ. ಸಾಕು ಇಲ್ಲಿಗೇ ಬಿಟ್ಟುಬಿಡಿ ಎಂದು ಸಲಹೆ ನೀಡಿದರು.
ಇನ್ನು ಶಾಂತಿ ಕ್ರಾಂತಿ ಹೈಕಮಾಂಡ್ ಗೆ ಬಿಟ್ಟ ವಿಚಾರ. ನಾವೆಲ್ಲಾ ಪಕ್ಷ ಹೇಳಿದ್ದನ್ನು ಕೇಳುತ್ತೇವೆ .ಪಕ್ಷ ನಮ್ಮನ್ನು ಗುರುತಿಸಿ ಸೇವೆ ಮಾಡುವ ಅವಕಾಶ ನೀಡಿದೆ. ನಿಮ್ಮ ಕೆಲಸ ಬೇರೆ ಇದೆ ಎಂದು ಪಕ್ಷ ಸೂಚಿಸಿದರೆ ಸಂತೋಷದಿಂದ ಕೇಳುತ್ತೇವೆ. ನಿನ್ನ ಸೇವೆ ಮಾಡುವ ಅವಕಾಶ ಇನ್ನೂ ಕೊಡು ಎಂದು ಶ್ರೀ ಕೃಷ್ಣ ಪರಮಾತ್ಮನಲ್ಲಿ ಬೇಡಿಕೊಳ್ಳುತ್ತೇನೆ ಎಂದರು.






















































