
ಕಾರ್ಕಳ: ತಾಲೂಕಿನ ಅಜೆಕಾರು ಗ್ರಾಮದ ಹೆರ್ಮುಂಡೆ ಎಂಬಲ್ಲಿ ಡಿಸೆಂಬರ್ 18ರಂದು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸುಬ್ರಾಯ ನಾಯಕ್ (78) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದು ಇವರಿಗೆ ಮದ್ಯಪಾನ ಮಾಡುವ ಚಟವಿದ್ದು ಪತ್ನಿಯ ಮರಣದ ನಂತರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಕೆ ಎಂ ಸಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆದರೆ ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೈಲಾನ್ ಹಗ್ಗದಿಂದ ರಿಂಗಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





