
ಅಜೆಕಾರು ಸಹಕಾರಿ ವ್ಯವಸಾಯಿಕ ಸಂಘ ಅಜೆಕಾರು ಇದರ ಪ್ರಧಾನ ಕಚೇರಿಗೆ ಕಾರ್ಕಳದ ಜನಪ್ರಿಯ ಶಾಸಕರಾದ ಹಾಗೂ ಮಾಜಿ ಸಚಿವರಾದ ವಿ ಸುನಿಲ್ ಕುಮಾರ್ ಅವರು ಭೇಟಿ ನೀಡಿದರು .
ಇದೇ ವೇಳೆ ಇವರಿಗೆ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಈ ಸಮಯದಲ್ಲಿ ಸಂಘದ ಅಧ್ಯಕ್ಷರಾದ ಶಾಂತಿರಾಜ್ ಜೈನ್ ಉಪಾಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ರಮತ ಶೆಟ್ಟಿ ಹಾಗೂ ಸಂಘದ ನಿರ್ದೇಶಕರು ಮತ್ತು ಸಿಬ್ಬಂದಿಗಳು ಊರ ಹಿರಿಯರು ಉಪಸ್ಥಿತಿ ಇದ್ದರು. ಈ ವೇಳೆ ಸಂಘದ ಅಭಿವೃದ್ಧಿಯ ಬಗ್ಗೆ ಚರ್ಚಿಸಿ ಸಲಹೆ ಮತ್ತು ಮಾರ್ಗದರ್ಶನವನ್ನು ನೀಡಿದರು.













