
ನವದೆಹಲಿ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು ಅದೇನೆಂದರೆ ಅಪರಾಧಿ ಎಂದು ಸಾಬೀತಾದರೂ ಅವರ ಮನೆಗಳನ್ನು ಧ್ವಂಸ ಮಾಡಲು ಸಾಧ್ಯವಿಲ್ಲ. ಇಂತಹ ಸನ್ನಿವೇಶದಲ್ಲಿ ಆರೋಪಿಗಳ ಮನೆ ಸೇರಿದಂತೆ ಸ್ಥಿರಾಸ್ತಿಗಳನ್ನು ಅಧಿಕಾರಿಗಳು ಹೇಗೆ ಧ್ವಂಸ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.
ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಪೀಠವು ವಿವಿಧ ಪ್ರಕರಣಗಳಲ್ಲಿನ ಆರೋಪಿಗಳ ಮನೆ ಧ್ವಂಸ ಮಾಡಿರುವುದನ್ನು ಪ್ರಶ್ನಿಸಿ ಮುಸ್ಲಿಂ ವಿದ್ವಾಂಸರ ಸಂಸ್ಥೆ, ಜಮಿಯತ್ ಉಲಮಾ-ಎ-ಹಿಂದ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿ ತಂದೆಗೆ ದಂಗೆಕೋರ ಮಗನಿರಬಹುದು. ಹಾಗಂತ ಇರುವ ಮನೆ ಕೆಡವಿದರೆ ಅವರು ಹೋಗುವುದು ಎಲ್ಲಿಗೆ? ಇದು ಸೂಕ್ತವಾದ ಮಾರ್ಗವಲ್ಲ ಎಂದು ಹೇಳಿದರು.
ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕಾನೂನು ಉಲ್ಲಂಘನೆಯಾದಾಗ ಮನೆಗಳನ್ನು ಕೆಡವಲಾಗುತ್ತಿದೆ. ಮುಖ್ಯವಾಗಿ ನಗರಸಭೆ ಕಾನೂನು ಉಲ್ಲಂಘನೆಯಾದರೆ ಮಾತ್ರ ಕ್ರಮಕೈಗೊಳ್ಳುತ್ತೇವೆ ಎಂದಾಗ ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ನಿಯಮ ಉಲ್ಲಂಘಿಸಿದರೆ ಧ್ವಂಸ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಆದರೆ ಆರೋಪಿಗಳ ಮನೆ ಧ್ವಂಸ ಒಪ್ಪುವುದಿಲ್ಲ ಎಂದು ಹೇಳಿತು.






























































































































