
ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಸಭಾಂಗಣದಲ್ಲಿ ಭಾನುವಾರ ನಡೆದ ಮೆಟ್ರೋ ಹಂತ-3ರ ಶಂಕುಸ್ಥಾಪನೆ, ಮೆಟ್ರೋ ಹಂತ- 2ರ ಆರ್ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಹಳದಿ ಮಾರ್ಗದ ಉದ್ಘಾಟನೆ ಮತ್ತು ಬೆಂಗಳೂರಿನಿಂದ ಬೆಳಗಾವಿ ಸೇರಿ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ, ಅಭಿವೃದ್ಧಿ ವಿಚಾರದಲ್ಲಿ ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳಷ್ಟೇ ಒತ್ತು ಕರ್ನಾಟಕಕ್ಕೂ ನೀಡಬೇಕು. ಉತ್ತರ ರಾಜ್ಯಗಳಂತೆ ಕರ್ನಾಟಕ್ಕೂ ಹೆಚ್ಚಿನ ಅನುದಾನ ನೀಡಬೇಕು ಎಂದು ಪ್ರಧಾನಿ ಮೋದಿ ಸಮ್ಮುಖದಲ್ಲೇ ಹೇಳಿದ್ದಾರೆ.
ಪ್ರಧಾನಿಯೆದುರೇ ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಕ್ಕೆ ಒತ್ತು ನೀಡಿದಷ್ಟೇ ಕರ್ನಾಟಕಕ್ಕೂ ಆದ್ಯತೆ ನೀಡಬೇಕು ಎಂದು ಒತ್ತಿ ಹೇಳಿದ ಸಿಎಂ ಸಿದ್ದರಾಮಯ್ಯ ಅವರು, ವೇದಿಕೆಯತ್ತ ನೋಡಿ ಏನು ನಗ್ತಿದಿಯಲ್ಲಯ್ಯಾ? ಎಂದು ಹೇಳಿ ತಾವೂ ನಕ್ಕರು. ಒಂದು ಕ್ಷಣ ಯಾರಿಗೆ ಈ ಮಾತು ಹೇಳಿದ್ದಾರೆಂದು ಅರ್ಥವಾಗದಿದ್ದರೂ ಈ ಮಾತು ಒಳಾರ್ಥ ಒಳಗೊಂಡಿದೆ.