28 C
Udupi
Monday, May 4, 2026
spot_img
spot_img
HomeBlogಅಯೋಧ್ಯೆ ರಾಮಲಲ್ಲಾನ ಭವ್ಯ ಮಂದಿರಕ್ಕೆ ಒಂದು ವರ್ಷದ ಹಿನ್ನೆಲೆಯಲ್ಲಿ ಮೂರು ದಿನ ವಿಶೇಷ ಕಾರ್ಯಕ್ರಮ

ಅಯೋಧ್ಯೆ ರಾಮಲಲ್ಲಾನ ಭವ್ಯ ಮಂದಿರಕ್ಕೆ ಒಂದು ವರ್ಷದ ಹಿನ್ನೆಲೆಯಲ್ಲಿ ಮೂರು ದಿನ ವಿಶೇಷ ಕಾರ್ಯಕ್ರಮ

ಅಯೋಧ್ಯೆ: ಅಯೋಧ್ಯೆ ರಾಮಲಲ್ಲಾನ ಭವ್ಯ ಮಂದಿರ ಆರಂಭವಾಗಿ ಇದೀಗ ಒಂದು ವರ್ಷ ತುಂಬಿದ್ದು ಈ ಹಿನ್ನೆಲೆಯಲ್ಲಿ ಜ.11ರಿಂದ 13ರವರೆಗೆ ಪ್ರತಿಷ್ಠಾ ವಾರ್ಷಿಕೋತ್ಸವ ಹಮ್ಮಿಕೊಳ್ಳಳಲಾಗಿದೆ.

2023 ಜ.22ರಂದು ಭವ್ಯವಾದ ಮಂದಿರ ಉದ್ಘಾಟನೆಯಾಗಿದ್ದು ಆದರೆ ಹಿಂದೂ ಪಂಚಾಂಗದ ಪ್ರಕಾರ ಈ ಸಂಭ್ರಮಕ್ಕೆ ಜ.11ರಂದು ವರ್ಷ ಪೂರ್ಣಗೊಳ್ಳುತ್ತದೆ. ಮೊದಲ ದಿನ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಬಾಲ ರಾಮನಿಗೆ ಅಭಿಷೇಕ ನೆರವೇರಿಸಲಿದ್ದು ಮಂದಿರದ ಸಮೀಪವಿರುವ ಅಂಗದ ಟೀಲಾದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.

ಖ್ಯಾತ ಗಾಯಕರ ಭಕ್ತಿ ಗೀತೆಗಳೂ ಬಿಡುಗಡೆಗೊಳ್ಳಲಿದ್ದು ದೇಶಾದ್ಯಂತವಿರುವ ಸಂತರು ಹಾಗೂ ಭಕ್ತರಿಗೆ ಅಯೋದ್ಯ ಟ್ರಸ್ಟ್ ಆಹ್ವಾನ ನೀಡಿದೆ.

ಅಯೋಧ್ಯ ರಾಮ ಮಂದಿರ ಉದ್ಘಾಟನೆಗೊಂಡ ವರ್ಷದೊಳಗೇ ದೇಶದ ನಂ.1 ಪ್ರವಾಸಿ ತಾಣ ಅಥವಾ ಭಕ್ತಾದಿಗಳ ನೆಚ್ಚಿನ ಭೇಟಿಯ ತಾಣವಾಗಿ ಹೊರಹೊಮ್ಮಿದೆ. 2024ರ ಜನವರಿ ಮತ್ತು ಸೆಪ್ಟೆಂಬರ್ ಅವಧಿಯಲ್ಲಿ ಉತ್ತರ ಪ್ರದೇಶಕ್ಕೆ ಸುಮಾರು 47 ಕೋಟಿ ಪ್ರವಾಸಿಗರು ಭೇಟಿ ನೀಡಿದ್ದರು. ಈ ಪೈಕಿ ಅಯೋಧ್ಯೆ ಒಂದಕ್ಕೇ ವಿದೇಶಿಗರೂ ಸೇರಿ 13.3 ಕೋಟಿ ಪ್ರವಾಸಿಗರು ಭೇಟಿ ಕೊಟ್ಟಿದ್ದಾರೆ. ಹಬ್ಬಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರ ದಂಡೇ ಹರಿದು ಬರುತ್ತಿದ್ದು ದೀಪಾವಳಿ ಸಂದರ್ಭದಲ್ಲಿ ಸರಯೂ ನದಿಯ ದಂಡೆಯ ಮೇಲೆ 22 ಲಕ್ಷ ಹಣತೆಗಳನ್ನು ಸರ್ಕಾರ ಬೆಳಗಿಸುವ ಮೂಲಕ ಗಿನ್ನೆಸ್‌ ದಾಖಲೆ ನಿರ್ಮಿಸಿತು. ರಾಮಮಂದಿರ ಸುರಕ್ಷತೆ ನಿರ್ವಹಣೆಗೆ ವಿಶ್ವದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪ್ರತಿಷ್ಠಿತ ‘ಸ್ವರ್ಡ್ ಆಫ್ ಆನರ್’ ಪ್ರಶಸ್ತಿಯನ್ನು ರಾಮಮಂದಿರ ತನ್ನ ಮುಡಿಗೇರಿಸಿಕೊಂಡಿದೆ.

  • ಜ.11ರ ಮೊದಲ ದಿನ ಪ್ರತಿಷ್ಟಾ ದ್ವಾದಶಿಯ ಆರಂಭಿಕ ದಿನವಾಗಿದ್ದು ಕಳೆದ ವರ್ಷದ ‘ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮದಂತೆಯೇ ಕಾರ್ಯಕ್ರಮ ಆರಂಭವಾಗಲಿದೆ .
  • ‘ಪಂಚಾಮೃತ’ ಮತ್ತು ಸರಯೂ ಜಲದ ಅಭಿಷೇಕವನ್ನು ಒಳಗೊಂಡಂತೆ ಅಭಿಷೇಕ ಸಮಾರಂಭ ಬೆಳಗ್ಗೆ 10 ಗಂಟೆಗೆ ಶುರುವಾಗಲಿದೆ.
    • ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವಿಂದ ರಾಮಲಲ್ಲಾಗೆ ಅಭಿಷೇಕ ಮಾಡಲಿದ್ದಾರೆ.
  • ಮಧ್ಯಾಹ್ನ 12.20ಕ್ಕೆ ಪ್ರಾಥಮಿಕ ಆರತಿ ಮಾಡಲಾಗುತ್ತದೆ.
  • ರಾಮಲಲ್ಲಾವನ್ನು ಚಿನ್ನದ ಮತ್ತು ಬೆಳ್ಳಿಯ ಎಳೆಗಳಿಂದ ದೆಹಲಿಯಲ್ಲಿ ತಯಾರಿಸಿದ ವಿಶಿಷ್ಟವಾದ ಪೀತಾಂಬರಿಯಿಂದ ಅಲಂಕಾರ ಮಾಡಲಾಗುವುದು.
  • ಬಳಿಕ 3 ದಿನ ಕಾಲ ಮಂಟಪ ಮತ್ತು ಯಜ್ಞಶಾಲೆಯಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು, ಹೋಮಗಳು, ಶಾಸ್ತ್ರೀಯ ಸಾಂಸ್ಕೃತಿಕ ಪ್ರದರ್ಶನಗಳು, ವಿವಿಧ ಆಚರಣೆಗಳು ಮತ್ತು ದೈನಂದಿನ ರಾಮಕಥಾ ಪ್ರವಚನಗಳು ಏರ್ಪಾಡಾಗಿವೆ.
  • 110 ಗಣ್ಯರು, ಜನಸಾಮಾನ್ಯರು ಸೇರಿ 5000 ಜನರಿಗೆ ಕಾರ್ಯಕ್ರಮ ವೀಕ್ಷಿಸಲು ಅವಕಾಶ ಮಾಡಲಾಗಿದೆ.
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page