31.8 C
Udupi
Thursday, April 23, 2026
spot_img
spot_img
HomeBlogಅರಣ್ಯ ಒತ್ತುವರಿ ತೆರವುಗೊಳಿಸಲು ಕಟ್ಟುನಿಟ್ಟಿನ ಆದೇಶ ನೀಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಒತ್ತುವರಿ ತೆರವುಗೊಳಿಸಲು ಕಟ್ಟುನಿಟ್ಟಿನ ಆದೇಶ ನೀಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ

ಬೆಂಗಳೂರು:ಅರಣ್ಯ ಸಚಿವ ಈಶ್ವರ ಖಂಡ್ರೆ ಅನಧಿಕೃತ ಹಾಗೂ ಒತ್ತುವರಿ ಮಾಡಿಕೊಂಡು ನಿರ್ಮಿಸಲಾದ ಹೋಂ ಸ್ಟೇ ಗಳನ್ನು ತೆರವುಗೊಳಿಸುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಕುರಿತು ಈಶ್ವರ ಖಂಡ್ರೆ ಅವರು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿದ್ದು ಅದರಲ್ಲಿ ರಾಜ್ಯದ 10 ಜಿಲ್ಲೆಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವುಗೊಳಿಸಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದ ಕಾರ್ಯಪಡೆ ರಚಿಸಲಾಗಿದ್ದು ಮೊದಲಿಗೆ ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿರುವ ರೆಸಾರ್ಟ್ ಗಳು, ಹೋಂ ಸ್ಟೇ ಗಳು ಹಾಗೂ ಕರ್ನಾಟಕ ಅರಣ್ಯ ಕಾಯ್ದೆ 19630 64a ಪ್ರಕ್ರಿಯೆ ಪೂರ್ಣಗೊಂಡಿರುವ ಮತ್ತು ನ್ಯಾಯಾಲಯದ ತಡೆಯಾಜ್ಞೆ ವಿಚಾರಣೆ ಬಾಕಿ ಇಲ್ಲದ ದೊಡ್ಡ ಒತ್ತುವರಿಗಳನ್ನು ತೆರವು ಮಾಡಲು ಸೂಚನೆ ನೀಡಲಾಗಿರುತ್ತದೆ.

ಕಳೆದ ಒಂದು ತಿಂಗಳಲ್ಲಿ ಈ ಕಾರ್ಯ ಪಡೆಯು ಒತ್ತುವರಿ ತೆರವಿನ ವಲಯವಾರು ವಿವರಗಳನ್ನು ಚಿತ್ರಸಹಿತ ಕಚೇರಿಗೆ ಸಲ್ಲಿಸಲು ಸೂಚಿಸಿದೆ ಎಂದು ಹೇಳಿದ್ದಾರೆ. ಅರಣ್ಯ ಜಮೀನು ಒತ್ತುವರಿ ಮಾಡಿ ನಿರ್ಮಿಸಿರುವ ರೆಸಾರ್ಟ್ ಹಾಗೂ ಹೋಂ ಸ್ಟೇ 30 ಎಕರೆಗಿಂತ ಹೆಚ್ಚಿನ ವಿಸ್ತೀರ್ಣದ ಅರಣ್ಯ ಭೂಮಿ ಒತ್ತುವರಿ ಹತ್ತರಿಂದ ಮೂವತ್ತು ಎಕರೆ ವರೆಗಿನ ಅರಣ್ಯ ಭೂಮಿ ಒತ್ತುವರಿ * ಮೂರರಿಂದ ಹತ್ತು ಎಕರೆ ವರೆಗಿನ ಅರಣ್ಯ ಭೂಮಿ ಒತ್ತುವರಿ 64 ಎ ಪ್ರಕ್ರಿಯೆ ಬಾಕಿ ಇದ್ದಲ್ಲಿ ಅಥವಾ ನ್ಯಾಯಾಲಯಗಳಲ್ಲಿ ಪ್ರಕರಣ ಬಾಗಿ ಇದ್ದಲ್ಲಿ ಇವುಗಳ ತ್ವರಿತ ವಿಲೇವಾರಿಗೆ ಕ್ರಮ ಕೈಗೊಂಡು ಒತ್ತುವರಿ ತೆರವು ಮಾಡಲು ಸೂಕ್ತ ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page