
ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಏರ್ ಇಂಡಿಯಾ ವಿಮಾನ AI171 ಪತನವಾಗಿದೆ.
242 ಪ್ರಯಾಣಿಕರಿದ್ದ ಈ ವಿಮಾನವು ಅಹಮದಾಬಾದ್‌ನಿಂದ ಇಂಗ್ಲೆಂಡ್‌ನ ಲಂಡನ್‌ನ ಗ್ಯಾಟ್‌ವಿಕ್‌ಗೆ ತೆರಳುತ್ತಿತ್ತು ಎಂದು ಮೂಲಗಳು ತಿಳಿಸಿವೆ.
ವಿಮಾನ ಪತನಗೊಂಡಿರುವ ಮೆದಾನಿ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ವಿಮಾನದಲ್ಲಿದ್ದರು ಎನ್ನಲಾಗುತ್ತಿದೆ. ಆದಾಗ್ಯೂ, ಎಷ್ಟು ಪ್ರಯಾಣಿಕರಿದ್ದರು, ದುರಂತದಲ್ಲಿ ಸಂಭವಿಸಿರುವ ಸಾವು–ನೋವಿನ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.



















