
ಆಂಧ್ರಪ್ರದೇಶ ತೆಲಂಗಾಣ ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಪ್ರಕರಣಗಳು ವರದಿಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಹೊರ ರಾಜ್ಯಗಳ ಕೋಳಿ ಮೊಟ್ಟೆ ಆಮದು ಸ್ಥಗಿತಗೊಳಿಸಲಾಗಿದೆ.
ಮಹಾರಾಷ್ಟ್ರದ ಏಳು ಜಿಲ್ಲೆಗಳಲ್ಲಿ ಹುಲಿ, ಚಿರತೆ ,ಕಾಗೆಗಳಲ್ಲೂ, ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಬೇರೆ ರಾಜ್ಯಗಳಿಂದ ಸೋಂಕು ಹರಡುವ ಭೀತಿ ಹಿನ್ನೆಲೆ ಬೀದರ್, ಬೆಳಗಾವಿ, ಬಳ್ಳಾರಿ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಇದಲ್ಲದೆ ರಾಜ್ಯದಲ್ಲಿ ಹಕ್ಕಿ ಜ್ವರ ಪ್ರಕರಣ ವರದಿಯಾಗದಿದ್ದರೂ ಬಿಸಿಲಿನ ತಾಪಮಾನದ ಪರಿಣಾಮ ಕೋಳಿಮಾಂಸ ವ್ಯಾಪಾರ ಕಡಿಮೆಯಾಗಿದೆ.
ಜ್ವರ ,ಕೆಮ್ಮು, ಗಂಟಲು ನೋವು, ಸ್ನಾಯು ನೋವು, ವಾಂತಿ, ಭೇದಿ ನೆಗಡಿ ಉಸಿರಾಟದ ತೊಂದರೆ ಇವುಗಳು ಹಕ್ಕಿ ಜ್ವರದ ಲಕ್ಷಣಗಳಾಗಿವೆ.