28.9 C
Udupi
Monday, May 4, 2026
spot_img
spot_img
HomeBlogಆರು ಮಂದಿ ನಕ್ಸಲರು, ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ

ಆರು ಮಂದಿ ನಕ್ಸಲರು, ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ

ಸರಕಾರದ ಶರಣಾಗತಿ ಪ್ಯಾಕೇಜ್ ನಿಂದ, ಆತಂಕದಲ್ಲಿ ರಾಜ್ಯದ ಜನತೆ: ವಿ. ಸುನಿಲ್ ಕುಮಾರ್

ಕಾರ್ಕಳ: ಇದೀಗ ರಾಜ್ಯದಲ್ಲಿ 6 ಮಂದಿ ನಕ್ಸಲರು ಶಸ್ತ್ರಾಸ್ತ್ರವನ್ನು ತೊರೆದು ಶರಣಾಗತಿಗೆ ಮುಂದಾಗಿದ್ದಾರೆ. ಇಂದು ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಎಸ್ ಪಿ ಸಮ್ಮುಖದಲ್ಲಿ ಆರು ಮಂದಿ ನಕ್ಸಲರು ಶರಣಾಗತಿಯಾಗಲಿದ್ದು, ಶರಣಾದ ನಕ್ಸಲರಿಗೆ ಸರಕಾರ ಭರ್ಜರಿ ಪ್ಯಾಕೇಜ್ ಘೋಷಿಸಿದೆ.

ಈ ವಿಚಾರದ ವಿರೋಧ ವ್ಯಕ್ತಪಡಿಸುತ್ತಾ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ,ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ.
ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ? ಎಂಬುದನ್ನು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ !
ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ ? ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page