ಗೃಹ ಸಚಿವ ಡಾ. ಜಿ. ಪರಮೇಶ್ವರ್ ಭರವಸೆ

ಸದನದಲ್ಲಿ ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ಯರಿಗೆ ಸಿಗಬೇಕಾದ ನೆರವು ಮತ್ತು ಪರಿಹಾರ ಕಳೆದ ಹತ್ತು ವರ್ಷಕ್ಕೂ ಹೆಚ್ಚು ಅವಧಿಯಿಂದ ಸಿಗದಿರುವ ಬಗ್ಗೆ ಕಾಂಗ್ರೆಸ್ ಸದಸ್ಯ ಕೆ ಶಿವಕುಮಾರ್ ಸದನದ ಗಮನ ಸೆಳೆದಿದ್ದು, ಈ ಬಗ್ಗೆ ಉತ್ತರಿಸಿದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಆಸಿಡ್ ದಾಳಿಗೆ ಒಳಗಾದ ಎಲ್ಲಾ ಮಹಿಳೆಯರಿಗೆ 2022 ಏಪ್ರಿಲ್ ಒಂದರಿಂದ ಮಾಸಿಕ 10,000 ಪಿಂಚಣಿಯನ್ನು ನೀಡಲಾಗುತ್ತಿದ್ದು, 2025ರ ಡಿಸೆಂಬರ್ ನಲ್ಲಿ ಒಟ್ಟು 59 ಫಲಾನುಭವಿಗಳಿಗೆ ಪಿಂಚಣಿ ಪಾವತಿ ಮಾಡಲಾಗಿದೆ. ಆ್ಯಸಿಡ್ ಸಂತ್ರಸ್ತೆಯರಿಗೆ ಮಾಸಿಕ 50,000 ಪಿಂಚಣಿ ದೊರೆಯುವಂತೆ ಮುಖ್ಯಮಂತ್ರಿಗಳ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿದರು.
ಆ್ಯಸಿಡ್ ಸಂತ್ರಸ್ತೆಯರಿಗೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ 5 ಲಕ್ಷಗಳಿಗೆ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ಈ ಮೊತ್ತವನ್ನು ಅನುದಾನವಾಗಿ ಕೊಡುವ ಕ್ರಮ ಕೈಗೊಳ್ಳುತ್ತೇವೆ. ಹಾಗೂ ಪರಿಹಾರ ಪಡೆಯಲು ಅಗತ್ಯವಿರುವ ಎಫ್ಐಆರ್ ಸೇರಿ ಇತರ ದಾಖಲೆಗಳನ್ನು ಸರಳೀಕರಣ ಗೊಳಿಸುತ್ತೇವೆ ಎಂದು ಅವರು ತಿಳಿಸಿದರು.









