
ಕಾರ್ಕಳ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು ಇಂದು ಕೋಟಿ ಚೆನ್ನಯ್ಯ ಥೀಮ್ ಪಾರ್ಕ್ ಗೆ ಭೇಟಿ ನೀಡಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು.
ಥೀಮ್ ಪಾರ್ಕ್ ಆವರಣದಲ್ಲಿ 3.5 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಒಳಾಂಗಣ ಕ್ರೀಡಾಂಗಣ ಕಾಮಗಾರಿಯ ಪರಿಶೀಲನೆ ನಡೆಸಿದ ಅವರು ಆಗಸ್ಟ್ ವೇಳೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಸೂಚನೆ ನೀಡಿದರು.
ಈ ವೇಳೆ ಯುವಜನ ಸಬಲೀಕರಣ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಷನ್ ಶೆಟ್ಟಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.



















