“ಕರ್ನಾಟಕದ ಹೊಸ ಯುವ ಯುಗ ಪ್ರಾರಂಭ”: ಡಿಕೆ

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಇಂದು ಸಂಜೆ 4.05 ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹೈಕಮಾಂಡ್ ಸೂಚನೆಯಂತೆ ಹೆಚ್ಚಿನ ಆಡಂಬರವಿಲ್ಲದೆ ಅತ್ಯಂತ ಶಿಸ್ತುಬದ್ಧವಾಗಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ಸೋನಿಯಾ ಗಾಂಧಿ ,ರಾಹುಲ್ ಗಾಂಧಿ ,ಪ್ರಿಯಾಂಕ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸಿಂಗ್ ಸುರ್ಜೆವಾಲ, ಕೆ ಸಿ ವೇಣುಗೋಪಾಲ್ ಹಾಗೂ ಕಾಂಗ್ರೆಸ್ ಆಡಳಿತವಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಆಗಮಿಸಲಿದ್ದಾರೆ.
ಕರ್ನಾಟಕದ ಜನರು ನನ್ನ ಮೇಲೆ ವಿಶ್ವಾಸ ಹೊಂದಿದ್ದಾರೆ. ರೈತರು ಮಹಿಳೆಯರು ಹಾಗೂ ಯುವ ಪೀಳಿಗೆಯನ್ನು ಸೇರಿ ನಾನು ಸಮಾಜದ ಪ್ರತಿಯೊಂದು ವರ್ಗವನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ. ಕರ್ನಾಟಕದಲ್ಲಿ ಹೊಸ ಯುವ ಯುಗ ಪ್ರಾರಂಭವಾಗಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.




























