
ನವದೆಹಲಿ: ಆಗಸ್ಟ್ 29 ಸಂಜೆ 8 ಗಂಟೆಯಿಂದ ಸಪ್ಟೆಂಬರ್ 2 ಬೆಳಗ್ಗೆ 6 ಗಂಟೆಯವರೆಗೆ ಪಾಸ್ಪೋರ್ಟ್ ಸಂಬಂಧಪಟ್ಟ ಕೆಲಸಗಳಿಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದ್ದು ಟೆಕ್ನಿಕಲ್ ಮೈಂಟೆನೆನ್ಸ್ ಕಾರಣದಿಂದ ಸಾರ್ವಜನಿಕರಿಗೆ ಈ ಸೌಲಭ್ಯ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ಪಾಸ್ಪೋರ್ಟ್ ಇಲಾಖೆ ತಿಳಿಸಿದೆ.
ಸದ್ಯ ಆಗಸ್ಟ್ 30ರಂದು ನೀಡಲಾಗಿರುವ ಎಲ್ಲಾ ಅಪಾಯಿಂಟ್ಮೆಂಟ್ ಗಳನ್ನು ರದ್ದು ಮಾಡಿ ಈ ಅಭ್ಯರ್ಥಿಗಳಿಗೆ ಎಸ್ಎಂಎಸ್ ಮೂಲಕ ಮುಂದಿನ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದೆ. ಪಾಸ್ಪೋರ್ಟ್ ಸೇವಾ ಪೋರ್ಟಲ್ ಮಾತ್ರವಲ್ಲದೇ ಪಾಸ್ಪೋರ್ಟ್ ಸೇವಾ ಕೇಂದ್ರಗಳು ಕೂಡ ಆಗಸ್ಟ್ 30ರಂದು ಬಂದ್ ಅಗಲಿದೆ.
ಪಾಸ್ಪೋರ್ಟ್ ಸೇವಾ ಪೋರ್ಟಲ್ ಬಂದ್ ಆಗಿರುವ ಸಮಯದಲ್ಲಿ ನಾಗರಿಕರಿಗೆ ಹಾಗೂ ಎಲ್ಲಾ ಎಂಇಎ, ಆರ್ಪಿಓ, ಬಿಒಐ, ಡಿಒಪಿ, ಪೊಲೀಸ್ ಪ್ರಾಧಿಕಾರಗಳಿಗೆ ಸಿಸ್ಟಮ್ ಲಭ್ಯ ಇರುವುದಿಲ್ಲ ಎಂದು ಇಲಾಖೆಯು ಮಾಹಿತಿ ನೀಡಿದೆ.













