
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ತಾಲೂಕು ಪಂಚಾಯಿತಿ ಮುಖಾಂತರ ಬಿಡುಗಡೆ ಮಾಡಬೇಕು ಅಂತ ಹೇಳಿರೋದ್ರಿಂದ ಸ್ವಲ್ಪ ತಡವಾಗಿದೆ. ಯಾವುದೇ ಕಾರಣಕ್ಕೂ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ನಿಲ್ಲೋದಿಲ್ಲ. 8-10 ದಿನಗಳಲ್ಲಿ ಬರುತ್ತೆ ಅಂತ ಹೇಳಿದ್ದೆ. 2 ದಿನ ಕಳೆದಿದೆ. ಇನ್ನು 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.








