28.8 C
Udupi
Wednesday, May 6, 2026
spot_img
spot_img
HomeBlogಇನ್ನು ಮುಂದೆ ರೈಲ್ವೆ ಟಿಕೆಟ್‌ ಬುಕ್ ಮಾಡಿದ ನಂತರ ಪಾವತಿ ಮಾಡಲು ಅವಕಾಶ…!

ಇನ್ನು ಮುಂದೆ ರೈಲ್ವೆ ಟಿಕೆಟ್‌ ಬುಕ್ ಮಾಡಿದ ನಂತರ ಪಾವತಿ ಮಾಡಲು ಅವಕಾಶ…!

ನವದೆಹಲಿ: ಭಾರತೀಯ ರೈಲ್ವೆ ಇಲಾಖೆಯು ಟಿಕೆಟ್‌ ಬುಕಿಂಗ್‌ನಲ್ಲಿ ಹೊಸ ಸೌಲಭ್ಯ ಜಾರಿಗೆ ತಂದು ಗ್ರಾಹಕರಿಗೆ ಸಿಹಿ ಸುದ್ದಿಯೊಂದನ್ನ ನೀಡಿದ್ದು ಅದೇನೆಂದರೆ ʻಈಗಲೇ ಬುಕ್ ಮಾಡಿ, ನಂತರ ಪಾವತಿಸಿʼ ಎಂಬ ಆಯ್ಕೆಯನ್ನು ಪರಿಚಯಿಸಿದೆ.

ಇದು ಯಾವುದೇ ಮುಂಗಡ ಪಾವತಿಯಿಲ್ಲದೆ ನಮ್ಮ ಟಿಕೆಟ್ ಅನ್ನು ಸುರಕ್ಷಿತವಾಗಿರಿಸಲು ಅನುವು ಮಾಡಿಕೊಡುತ್ತದೆ. ಆದರೆ ಸಂಪೂರ್ಣ ಬುಕಿಂಗ್ ಪ್ರಕ್ರಿಯೆಯನ್ನು ಆನ್‌ಲೈನ್‌ನಲ್ಲಿ ಪೂರ್ಣಗೊಳಿಸಬೇಕು ಮತ್ತು ಇದು ಕೆಲವು ಪ್ರಮುಖ ಷರತ್ತುಗಳನ್ನು ಒಳಗೊಂಡಿದೆ.

  1. ಮೊದಲಿಗೆ IRCTC ಖಾತೆಗೆ ಲಾಗ್ ಇನ್ ಮಾಡಬೇಕು.
  2. ‘ಬುಕ್ ನೌ’ ಆಯ್ಕೆಯನ್ನು ಕ್ಲಿಕ್‌ ಮಾಡಬೇಕು.
  3. ಪ್ರಯಾಣಿಕರ ವಿವರಗಳು ಮತ್ತು ಕ್ಯಾಪ್ಚಾ ಕೋಡ್ ಕೇಳುವ ಹೊಸ ಪುಟವು ಕಾಣಿಸಿಕೊಳ್ಳುತ್ತದೆ. ಅಗತ್ಯವಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಸಲ್ಲಿಸುವ ಆಯ್ಕೆಯನ್ನು ಕ್ಲಿಕ್ ಮಾಡಬೇಕು.
  4. ಪಾವತಿ ಪೇಜ್‌ ನಲ್ಲಿ ಕ್ರೆಡಿಟ್/ಡೆಬಿಟ್ ಕಾರ್ಡ್, BHIM ಅಪ್ಲಿಕೇಶನ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಲು ಆಯ್ಕೆ ಮಾಡಬಹುದು.
  5. ಪೇ ಲೇಟರ್ ಆಯ್ಕೆಯನ್ನು ಬಳಸಲು, ಮೊದಲು www.epaylater.in ಗೆ ಭೇಟಿ ನೀಡುವ ಮೂಲಕ ನೋಂದಾಯಿಸಿಕೊಳ್ಳಬೇಕು.
  6. ನೋಂದಣಿ ನಂತರ, ಪೇ ಲೇಟರ್ ಆಯ್ಕೆಯು ಲಭ್ಯವಾಗುತ್ತದೆ. ಅದನ್ನು ಆಯ್ಕೆ ಮಾಡಿ ಮತ್ತು ಯಾವುದೇ ಮುಂಗಡ ಪಾವತಿಯಿಲ್ಲದೇ ನಾವು ದೃಢೀಕೃತ ಟಿಕೆಟ್ ಅನ್ನು ಪಡೆಯುತ್ತೇವೆ.

ಟಿಕೆಟ್ ಅನ್ನು ಬುಕ್ ಮಾಡಿದ 14 ದಿನಗಳಲ್ಲಿ ಪಾವತಿಯನ್ನು ಪೂರ್ಣಗೊಳಿಸಬೇಕಿದ್ದು ಒಂದು ವೇಳೆ 14 ದಿನಗಳಲ್ಲಿ ಹಣ ಪಾವತಿ ಮಾಡಲು ವಿಫಲವಾದರೆ 3.5% ಸೇವಾ ಶುಲ್ಕ ವಿಧಿಸಲಾಗುತ್ತದೆ. ಆ ನಂತರವೂ ಪಾವತಿಯನ್ನ ಮತ್ತಷ್ಟು ವಿಳಂಬ ಮಾಡಿದ್ರೆ ಹೆಚ್ಚುವರಿ ಶುಲ್ಕ ವಿಧಿಸಲಾಗುವುದಿಲ್ಲ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page