
ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯು ಪಾರಿವಾಳಗಳಿಂದ ಶ್ವಾಸಕೋಶದ ಕಾಯಿಲೆಗಳು ಹರಡುತ್ತಿರುವ ಕಾರಣದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದನ್ನು ನಿಷೇಧ ಮಾಡಿ ಆದೇಶ ಹೊರಡಿಸಿದೆ.
ಜಿಬಿಎ ಗುರುತಿಸಿರುವ ಸ್ಥಳಗಳಲ್ಲಿ ಮಾತ್ರ ನಿಗದಿತ ಸಮಯದಲ್ಲಿ ಪಾರಿವಾಳಗಳಿಗೆ ಆಹಾರ ನೀಡಬೇಕು. ಇದನ್ನು ಉಲ್ಲಂಘಿಸಿದರೆ ಭಾರತೀಯ ನ್ಯಾಯ ಸಂಹಿತೆ 270 ಮತ್ತು 271ರಂತೆ ಪ್ರಕರಣ ದಾಖಲಿಸಲಾಗುತ್ತದೆ. ಅಲ್ಲದೆ ನಿಯಮ ಉಲ್ಲಂಘಿಸಿ ಪಾರಿವಾಳಗಳಿಗೆ ಆಹಾರ ನೀಡಿದವರಿಗೆ ಸಾಂಕ್ರಮಿಕ ರೋಗ ಹರಡಿದ ನಿರ್ಲಕ್ಷ್ಯದ ಪ್ರಕರಣ ದಾಖಲಿಸಿ ದಂಡ ಹಾಗೂ ಆರು ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.





