27.2 C
Udupi
Tuesday, June 2, 2026
spot_img
spot_img
HomeBlogಇನ್ನೆರಡು ದಿನಗಳಲ್ಲಿ ಕೇರಳಕ್ಕೆ ನೈರುತ್ಯ ಮುಂಗಾರು ಪ್ರವೇಶ ಸಾಧ್ಯ: ಭಾರತೀಯ ಹವಾಮಾನ ಇಲಾಖೆ

ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ನೈರುತ್ಯ ಮುಂಗಾರು ಪ್ರವೇಶ ಸಾಧ್ಯ: ಭಾರತೀಯ ಹವಾಮಾನ ಇಲಾಖೆ

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ಯು ನೈರುತ್ಯ ಮುಂಗಾರು ಮುಂದಿನ ಎರಡು-ಮೂರು ದಿನಗಳಲ್ಲಿ ಕೇರಳ ತಲುಪುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಸಾಮಾನ್ಯವಾಗಿ ಜೂನ್ ಆರಂಭದಲ್ಲಿ ಮುಂಗಾರು ಪ್ರವೇಶವಾಗುತ್ತದೆ. ಅರಬ್ಬಿ ಸಮುದ್ರ, ಲಕ್ಷದ್ವೀಪ, ಕೇರಳ ಹಾಗೂ ತಮಿಳುನಾಡಿನ ಕೆಲವು ಭಾಗಗಳಿಗೆ ಶೀಘ್ರದಲ್ಲೇ ಮಳೆಗಾಲ ವಿಸ್ತರಿಸಲಿದೆ ಎಂದು ಇಲಾಖೆ ಹೇಳಿದೆ.

ಈ ಹಿಂದೆ ಮೇ 26ರ ವೇಳೆಗೆ ಮುಂಗಾರು ಕೇರಳ ಪ್ರವೇಶಿಸಬಹುದು ಎಂದು ಅಂದಾಜಿಸಲಾಗಿತ್ತು. ಎಲ್ ನಿನೊ ಪರಿಣಾಮದಿಂದ ಈ ವರ್ಷದ ಮಳೆ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆಯಿದೆ ಎಂದು IMD ತಿಳಿಸಿತ್ತು.

ಜೂನ್ ತಿಂಗಳಲ್ಲಿ ಎಲ್ ನಿನೊ ಪ್ರಭಾವ ಕ್ಷೀಣಿಸಬಹುದಾದರೂ, ಸೆಪ್ಟೆಂಬರ್ ವೇಳೆಗೆ ಮತ್ತೆ ಬಲಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page