
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಹಿನ್ನೆಲೆ ಮಧ್ಯಪ್ರಾಚ್ಯ ದಲ್ಲಿ ಯುದ್ಧದ ಭೀತಿ ಎದುರಾಗಿದ್ದು, ಸಂಯುಕ್ತ ಅರಬ್ ಸಂಸ್ಥಾನದಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳ ಸುರಕ್ಷತೆಗಾಗಿ ಅಬುಧಾಬಿಯಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತುರ್ತು ಸಲಹೆ ಹೊರಡಿಸಿದೆ.
ಪ್ರಸ್ತುತ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯರು ಈ ಕೆಳಗಿನ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಅಗತ್ಯವಿಲ್ಲದಿದ್ದಲ್ಲಿ ಯಾವುದೇ ರೀತಿಯ ಪ್ರಯಾಣವನ್ನು ತಪ್ಪಿಸಿ
ಸುತ್ತಮುತ್ತಲಿನ ಪರಿಸ್ಥಿತಿಯ ಬಗ್ಗೆ ನಿಗಾವಹಿಸಿ ಮತ್ತು ಜಾಗರೂಕರಾಗಿರಿ
ಯುಎಇ ಅಧಿಕಾರಿಗಳು ಮತ್ತು ಭಾರತೀಯ ರಾಯಭಾರ ಕಚೇರಿ ಕಾಲಕಾಲಕ್ಕೆ ನೀಡುವ ಸುರಕ್ಷಿತ ಮಾರ್ಗಸೂಚಿಗಳನ್ನು ಅನುಸರಿಸಿ.
ತುರ್ತು ಸಹಾಯವಾಣಿ ಸಂಖ್ಯೆಗಳು
ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಸಹಾಯ ಪಡೆಯಲು ಯುಎಇ ನಲ್ಲಿರುವ ಭಾರತೀಯರು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು
ಟ್ರೊಲ್ ಫ್ರೀ ಸಂಖ್ಯೆ: 800 – 46342
ವಾಟ್ಸಾಪ್ ಸಂಖ್ಯೆ: 971543090571
ಇ-ಮೇಲ್: pbsk.dubai@mea.gov.in/ca.abudhabi@mea.gov.in






