33.1 C
Udupi
Sunday, April 26, 2026
spot_img
spot_img
HomeBlogಇಸ್ರೇಲ್‌ ಭೀಕರ ವಾಯುದಾಳಿಗೆ 22 ಮಂದಿ ಬಲಿ…!

ಇಸ್ರೇಲ್‌ ಭೀಕರ ವಾಯುದಾಳಿಗೆ 22 ಮಂದಿ ಬಲಿ…!

ಬೈರೂತ್: ಇಸ್ರೇಲ್‌ ಸೇನೆಯು ಸೆಂಟ್ರಲ್‌ ಬೈರೂತ್‌ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ ಮೇಲೆ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 22 ಮಂದಿ ಹತ್ಯೆಯಾಗಿದ್ದು, ಸುಮಾರು 117 ಮಂದಿ ಗಾಯಗೊಂಡ ಘಟನೆ ನಡೆದಿದೆ.

ಅದೃಷ್ಟವಶಾತ್‌ ಈ ದಾಳಿಯಲ್ಲಿ ಹಿಜ್ಬುಲ್ಲಾದ ಉನ್ನತ ಅಧಿಕಾರಿಯೊಬ್ಬರು ಬದುಕುಳಿದಿದ್ದಾರೆ ಎಂದು ಲೆಬನಾನ್‌ ಆರೋಗ್ಯ ಸಚಿವಾಲಯ ಹೇಳಿಕೊಂಡಿದೆ.

ದಾಳಿಯಿಂದ ಲೆಬನಾನ್‌ನಲ್ಲಿ ವಿಶ್ವಸಂಸ್ಥೆಯ ಶಾಂತಿ ಪಾಲಕರಿಗೆ ಅಪಾಯವುಂಟಾಗಿದ್ದು, ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆಯಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸೆಂಟ್ರಲ್‌ ಬೈರೂತ್‌ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ, ಲೆಬನಾನ್‌ ಸೇನಾ ಟ್ಯಾಂಕರ್‌ಗಳನ್ನ ಗುರಿಯಾಗಿಸಿ ಇಸ್ರೇಲ್‌ ದಾಳಿ ನಡೆಸಿದೆ. ಹಿಜ್ಬುಲ್ಲಾ ಮುಖ್ಯಸ್ಥ ನಸ್ರಲ್ಲಾನನ್ನ ಹೊಡೆದುರುಳಿಸಿದ ನಂತರ ಉನ್ನತ ಅಧಿಕಾರಿಗಳ ಸರಣಿ ಹತ್ಯೆಯನ್ನೇ ಹೆಚ್ಚಾಗಿ ಗುರಿಯಾಗಿಸಿದೆ. ಆದ್ರೆ ಈ ದಾಳಿಯಲ್ಲಿ ಹಿಜ್ಬುಲ್ಲಾದ ಉನ್ನತಾಧಿಕಾರಿ ಬದುಕುಳಿದಿದ್ದಾರೆ. ಈ ದಾಳಿಯು ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆ ಮಾಡಿದೆ ಎಂದು ಸ್ಪೇನ್‌ ಹಾಗೂ ಇಟಲಿ ದೇಶಗಳು ಆರೋಪಿಸಿವೆ.

ಇತ್ತೀಚಿನ ದಿನಗಳಲ್ಲಿ ಇಸ್ರೇಲ್‌ನ ಯುದ್ಧ ವಿಮಾನಗಳು ಲೆಬನಾನ್‌ನ ಬೆಕಾ ಪ್ರದೇಶ ಮತ್ತು ಬೈರೂತ್‌ನಲ್ಲಿ ವ್ಯಾಪಕವಾದ ವೈಮಾನಿಕ ದಾಳಿಗಳನ್ನು ನಡೆಸಿದೆ. ಮೂಲಸೌಕರ್ಯ ತಾಣಗಳು, ಲಾಂಚರ್‌ಗಳು, ಕಮಾಂಡ್ & ಕಂಟ್ರೋಲ್ ಸೆಂಟರ್‌ಗಳು ಹಾಗೂ ಶಸ್ತ್ರಾಸ್ತ್ರಗಳ ಸಂಗ್ರಹಣಾ ಸೌಲಭ್ಯ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಿವೆ. ಸದ್ಯಕ್ಕೆ ಕದನ ವಿರಾಮ ಘೋಷಣೆಯಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲವಾದ್ದರಿಂದ ಭಯಭೀತರಾಗಿರುವ 2.20 ಲಕ್ಷ ಮಂದಿ ಸಿರಿಯಾಕ್ಕೆ ಪಲಾಯನ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page