
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಆಯೋಜಿಸಿದ್ದ ‘ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಉದ್ಘಾಟಿಸಿ ಮಾತನಾಡಿದ್ದು ಈ ವೇಳೆ ಈಡಿಗ ಸಮುದಾಯ ಕಾರ್ಯೋನ್ಮುಖವಾದರೆ ಎಂಜನಿಯರಿಂಗ್ ಕಾಲೇಜಷ್ಟೇ ಅಲ್ಲ, ಮೆಡಿಕಲ್ ಕಾಲೇಜನ್ನೂ ನೀಡಲಾಗುವುದು ಎಂದು ಭರವಸೆ ನೀಡಿದರು.
ಎಸ್.ಬಂಗಾರಪ್ಪನವರ ಆಡಳಿತಾವಧಿಯಲ್ಲಿ ತಿಮ್ಮೇಗೌಡರಿಗೆ ಎಂಜಿನಿಯರಿಂಗ್ ಕಾಲೇಜು ಮಂಜೂರು ಮಾಡುವುದಾಗಿ ಹೇಳಿ ಮಂಜೂರು ಮಾಡಲಿಲ್ಲ. ಈಗ ನೀವು ಮುಂದಾದರೆ ಎಂಜಿನಿಯರಿಂಗ್, ಮೆಡಿಕಲ್ ಕಾಲೇಜ್ ಸೇರಿ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದರು.
ಈಡಿಗರ ಸಂಘದ ಸಮುದಾಯ ಭವನಕ್ಕೆ 10 ಎಕರೆ ಭೂಮಿ ನೀಡಲಾಗಿದೆ. ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ನೋಂದಣಿ ಮಾಡಿಸಿ ದೇವರಾಜ ಅರಸು ಅಭಿವೃದ್ಧಿ ನಿಗಮದಲ್ಲಿ ಇರಿಸಿರುವ 10 ಕೋಟಿ ರು. ನಾರಾಯಣ ಗುರು ಅಭಿವೃದ್ಧಿ ನಿಗಮದಲ್ಲಿ ಇರಿಸಲಾಗುವುದು ಎಂದರು.