
ಉಡುಪಿ: ಜುಲೈ 15 ರಂದು ಉಡುಪಿಯ ಬಾರ್ ಮಾಲಕರ ಮನೆ ಅಂಬಲಪಾಡಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲಕರಾದ ಪತಿ ರಮಾನಂದ ಶೆಟ್ಟಿ ಜು.15ರ ಸೋಮವಾರ ಸಾವನ್ನಪ್ಪಿದ್ದರು, ಪತ್ನಿ ಅಶ್ವಿನಿ ಶೆಟ್ಟಿ (47) ಚಿಕಿತ್ಸೆ ಫಲಿಸದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಜು.16ರ ಮಂಗಳವಾರ ನಿಧನ ಹೊಂದಿದ್ದಾರೆ.ಮೃತರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಅಶ್ವಿನಿ ಶೆಟ್ಟಿ ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿದ್ದರು. ಬಂಟರ ಸಂಘ, ಸಾಮಾಜಿಕ ಜಾಲಾತಾಣದಲ್ಲಿ ಸಕ್ರಿಯರಾಗಿದ್ದು, ತುಳುನಾಡಿನ ಆಚಾರ-ವಿಚಾರಗಳನ್ನು ಹಾಗೂ ಭಾರತೀಯ ಸಂಸ್ಕೃತಿ ಬಿಂಬಿಸುವ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿ ಪ್ರಖ್ಯಾತಿಗಳಿಸಿದ್ದರು.
ಘಟನೆಯಲ್ಲಿ ಇಬ್ಬರು ಮಕ್ಕಳು ಹಂಸಿಜಾ (20) ಮತ್ತು ಅಭಿಕ್ (16) ಅಪಾಯದಿಂದ ಪಾರಾಗಿದ್ದಾರೆ








