ಸಾರ್ವಜನಿಕರು ಸ್ವಚ್ಛತೆಯ ಬಗ್ಗೆ ಗಮನಹರಿಸುವಂತೆ ಜಿಲ್ಲಾಧಿಕಾರಿ ಮನವಿ

ಉಡುಪಿ: ಕಾರ್ಕಳದ ಈದು, ಮಲ್ಪೆ, ಶಿರ್ವ, ಕಾಪು, ಕೆಮ್ಮಣ್ಣು ಭಾಗಗಳಲ್ಲಿ ವಾಂತಿಭೇದಿ ಪ್ರಕರಣಗಳು ಕಂಡುಬಂದಿದ್ದು ,ಕಳೆದ ಒಂದೇ ವಾರದಲ್ಲಿ 11 ಕಾಲರ ಪ್ರಕರಣಗಳು ವರದಿಯಾಗಿದೆ. ಆದ್ದರಿಂದ ಸಾರ್ವಜನಿಕರು ಸ್ವಚ್ಛತೆಯ ಬಗ್ಗೆ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ತಿಳಿಸಿದ್ದಾರೆ.
ಜನರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಹೋಟೆಲ್ ರೆಸ್ಟೋರೆಂಟ್ ಗಳಲ್ಲಿ ಜನರಿಗೆ ಕುಡಿಯಲು ಶುದ್ಧವಾದ ಬಿಸಿನೀರು ನೀಡಬೇಕು. ಊಟ ತಯಾರಿ ಮತ್ತು ಊಟ ಮಾಡುವ ಮುನ್ನ ಕೈಗಳನ್ನು ಸಾಬೂನಿನಿಂದ ತೊಳೆದು ಸ್ವಚ್ಛಗೊಳಿಸಬೇಕು. ಯಾವುದೇ ಸಮುದ್ರದ ಉತ್ಪನ್ನಗಳನ್ನು ಮುಟ್ಟಿದಾಗ ಕೈ ತೊಳೆದು ಕೊಳ್ಳುವುದು ಅಗತ್ಯ. ರಸ್ತೆ ಬದಿಯಲ್ಲಿ ಮಾರಾಟ ಮಾಡುವ ತಿಂಡಿ ತಿನಿಸುಗಳ ಬಗ್ಗೆ ಎಚ್ಚರ ವಹಿಸಬೇಕು. ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಕಾಲರಾ ತಡೆಗಟ್ಟಲು ಸಾಧ್ಯ ಎಂದು ಅವರು ತಿಳಿಸಿದ್ದಾರೆ.













