
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಸಹಯೋಗದೊಂದಿಗೆ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ಉಡುಪಿ ಜಲ್ಲಾ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸಂಸ್ಥೆಯ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ನಮೃತಾ ಎನ್ ಆರ್, ಧೃತಿ ಕೆ. ಶೆಟ್ಟಿ, ಆಧ್ಯಾ ಲೋಕೇಶ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿನಿಯರನ್ನು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಮತ್ತು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್(ರಿ.)ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರು ಹಾಗೂ ಬೋಧಕ- ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.