
ಉಡುಪಿ: ಮಂಗಳವಾರ ರಾತ್ರಿ ಮಲ್ಪೆ ಸಮೀಪದಲ್ಲಿ ಜಿಲ್ಲಾ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಮುಖಂಡ ಮಂಜುನಾಥ ಕೊಳ ಅವರಿಗೆ ಚೂರಿ ಇರಿದು ಹಲ್ಲೆ ನಡೆಸಿದ ಘಟನೆ ನಡೆದಿದೆ.
ಮಂಗಳವಾರ ಬೀಚ್ ಬಳಿ ಜೋಡಿಯೊಂದರ ಪ್ರೇಮದ ವಿಚಾರವಾಗಿ ರಾಜಿ ಮಾತುಕತೆಗೆ ಮಂಜು ಕೊಳ ಅವರನ್ನು ಕರೆದಿದ್ದು ಈ ವೇಳೆ ಮಾತಿಗೆ ಮಾತು ಬೆಳೆದು ಯುವಕ ಅವರ ಹೊಟ್ಟೆಯ ಭಾಗಕ್ಕೆ ಚೂರಿ ಇರಿದಿದ್ದಾನೆ ಎಂದು ತಿಳಿದುಬಂದಿದೆ. ತೀವ್ರವಾಗಿ ಗಾಯಗೊಂಡ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಮಂಜು ಕೊಳ ಅವರು ಪ್ರಾಣಪಾಯದಿಂದ ಪಾರಾಗಿದ್ದು ಇದು ವೈಯುಕ್ತಿಕ ಕಾರಣಕ್ಕೆ ನಡೆದ ಇರಿತವಾಗಿದ್ದು ಇದರಲ್ಲಿ ಕೋಮು ಸಂಘರ್ಷ ಇಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ.






