
ಉಡುಪಿ: ಚಾಕ್ಲೇಟ್ ಆಸೆ ತೋರಿಸಿ ಐದು ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಲ್ಲಿ ಪ್ರಕರಣ ದಾಖಲಾಗಿದ್ದು ಇದರ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಆರೋಪಿಯು ಅಪರಿಚಿತನಾಗಿದ್ದರಿಂದ ಆತನ ಪತ್ತೆಗೆ ಐದು ತಂಡಗಳನ್ನು ರಚಿಸಿ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿ ಆರೋಪಿಯ ಮಾಹಿತಿಯನ್ನು ನೀಡುವಂತೆ ಸಾರ್ವಜನಿಕರಿಗೂ ಮನವಿ ಮಾಡಲಾಗಿತ್ತು. ಹೀಗಾಗಿ ಸಾರ್ವಜನಿಕರ ಸಹಾಯ ಮತ್ತು ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ಸತತ ಪ್ರಯತ್ನದ ಫಲವಾಗಿ ಬಾಗಲಕೋಟೆ ಜಿಲ್ಲೆಯ ಆರೋಪಿ ಮುತ್ತು (35) ಎಂಬಾತನನ್ನು ಶ್ರೀಕೃಷ್ಣಮಠದ ಪರಿಸರದ ವಾದಿರಾಜ 3ನೇ ಕ್ರಾಸ್ ಬಳಿ ವಶಕ್ಕೆ ಪಡೆಯಲಾಗಿದೆ.





















