
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ಅವರ ಅಧಿಕೃತ ವಾಟ್ಸಾಪ್ ಖಾತೆಯನ್ನು ಹ್ಯಾಕ್ ಮಾಡಿ ಶಾಸಕರ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಲಪಟಾಯಿಸಲು ಸಂಚು ರೂಪಿಸಿದ ಘಟನೆ ಬೆಳಕಿಗೆ ಬಂದಿದೆ.
ಹ್ಯಾಕರ್ಸ್‌ಗಳು ಶಾಸಕ ಯಶ್‌ಪಾಲ್ ಸುವರ್ಣ ಅವರ ವಾಟ್ಸಾಪ್ ಖಾತೆಯನ್ನು ಹ್ಯಾಕ್ ಮಾಡಿ ಶಾಸಕರ ಕಾಂಟ್ಯಾಕ್ಟ್ ಲಿಸ್ಟ್‌ನಲ್ಲಿರುವ ಹಲವು ವ್ಯಕ್ತಿಗಳಿಗೆ ಗೂಗಲ್ ಪೇ ಮೂಲಕ ತುರ್ತಾಗಿ ಹಣ ಕಳುಹಿಸುವಂತೆ ಸಂದೇಶ ರವಾನಿಸುತ್ತಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಶಾಸಕರು, ‘ಯಾರೂ ಇಂತಹ ಸಂದೇಶಗಳಿಗೆ ಪ್ರತಿಕ್ರಿಯಿಸಬೇಡಿ ಮತ್ತು ಹಣ ನೀಡಬೇಡಿ’ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.





