
ಉಡುಪಿ: ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲಾಗಿರುವ ದುರ್ಘಟನೆ ಸಂಭವಿಸಿದೆ.
ಮೃತ ದುರ್ದೈವಿಗಳನ್ನು ಸುರೇಶ್ ಖಾರ್ವಿ (45), ರೋಹಿತ್ ಖಾರ್ವಿ (38), ಜಗ್ಗು ಯಾನೆ ಜಗದೀಶ್ ಖಾರ್ವಿ (36) ಎಂದು ಗುರುತಿಸಲಾಗಿದ್ದು ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡ ಹಿನ್ನೆಲೆ ವಾಪಸ್ ಆಗುವಾಗ ದೋಣಿ ಮಗುಚಿದೆ. ಸದ್ಯ ನೀರುಪಾಲಾದ ಮೀನುಗಾರರಿಗೆ ಸಮುದ್ರದಲ್ಲಿ ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.






















































