25.9 C
Udupi
Friday, July 11, 2025
spot_img
spot_img
HomeBlogಹಿಂದೂ ಜನಜಾಗೃತಿ ಸಮಿತಿಯಿಂದ ಉಡುಪಿಯಲ್ಲಿ ಗುರುಪೂರ್ಣಿಮಾ ಮಹೋತ್ಸವ

ಹಿಂದೂ ಜನಜಾಗೃತಿ ಸಮಿತಿಯಿಂದ ಉಡುಪಿಯಲ್ಲಿ ಗುರುಪೂರ್ಣಿಮಾ ಮಹೋತ್ಸವ

ಉಡುಪಿ : ಪ್ರಭು ಶ್ರೀರಾಮನು ರಾವಣನ ವಿರುದ್ಧ ವಾನರಸೇನೆಯ ಸಂಘಟನೆ ನಿರ್ಮಿಸಿದರು. ಛತ್ರಪತಿ ಶಿವಾಜಿ ಮಹಾರಾಜರೂ ಹಿಂದೂಗಳ ಮೇಲೆ ಆಕ್ರಮಣ ಮಾಡುವ ಇಸ್ಲಾಮೀ ಸುಲ್ತಾನರ ವಿರುದ್ಧ ಸಾಮಾನ್ಯ ಮಾವಳೆಗಳ ಸಂಘಟನೆಯನ್ನು ಮಾಡಿ ಹಿಂದವೀ ಸ್ವರಾಜ್ಯವನ್ನು ಸ್ಥಾಪಿಸಿದರು. ಈ ಸಂಘಟನೆಯು ಧರ್ಮಕ್ಕಾಗಿ ತ್ಯಾಗ ಮಾಡುವ ಪ್ರೇರಣಾದಾಯಿ ವಿಚಾರದ ಮೇಲೆ ಆಗಿತ್ತು. ಇಂತಹ ನಿಸ್ವಾರ್ಥ ಸಂಘಟನೆ ನಿರ್ಮಾಣವಾದಾಗಲೇ ನಿಜವಾದ ಅರ್ಥದಲ್ಲಿ ರಾಮರಾಜ್ಯ ಮತ್ತು ಹಿಂದವೀ ಸ್ವರಾಜ್ಯ ಸಾಕಾರಗೊಳ್ಳುತ್ತದೆ. ಪ್ರಸ್ತುತ ಕಾಲದಲ್ಲಿಯೂ ಇಂತಹ ಸಂಘಟನೆಯ ಆವಶ್ಯಕತೆಯಿರುವುದರಿಂದ ಪ್ರಭು ಶ್ರೀರಾಮನಂತೆ ಆದರ್ಶ ಸಂಘಟನೆ ನಿರ್ಮಿಸಲು ಕಟಿಬದ್ಧರಾಗೋಣ ಎಂದು ಹಿಂದೂ ಜನಜಾಗೃತಿ ಸಮಿತಿಯ ಡಾll ಪ್ರಣವ್ ಮಲ್ಯ ಇವರು ಕರೆ ನೀಡಿದರು. ಅವರು 10 ಜುಲೈ 2025, ಗುರುವಾರದಂದು ಉಡುಪಿಯ ಹೋಟೆಲ್ ಕಿದಿಯೂರಿನ ಶೇಷಶಯನ ಸಭಾಗೃಹದಲ್ಲಿ ನಡೆದ ಗುರುಪೂರ್ಣಿಮಾ ಮಹೋತ್ಸವದಲ್ಲಿ ಮಾತನಾಡುತ್ತಿದ್ದರು.

        ಈ ಕಾರ್ಯಕ್ರಮದಲ್ಲಿ ಕಾಪುವಿನ ಮಾಜಿ ಶಾಸಕ ಲಾಲಾಜಿ ಮೆಂಡನ್, ಮಾಜಿ ಏರ್ ವೈಸ್ ಮಾರ್ಷಲ್ ರಮೇಶ ಕಾರ್ಣಿಕ್, ಮಾಜಿ ಇಸ್ರೋ ವಿಜ್ಞಾನಿ ಜನಾರ್ಧನ ಇಡ್ಯಾ, ಅಡ್ವೊಕೇಟ್ ಸಂತೋಷ್ ಮೂಡುಬೆಳ್ಳೆ, ಶ್ರೀ ಸೀತಾರಾಮ ಭಟ್ ಕಾಪು ಇವರೂ ಸೇರಿದಂತೆ  300ಕ್ಕೂ  ಹೆಚ್ಚು ರಾಷ್ಟ್ರನಿಷ್ಠರು ಉಪಸ್ಥಿತರಿದ್ದರು.

         ಡಾll ಪ್ರಣವ್ ಮಲ್ಯ ಇವರು ಮುಂದುವರೆಸಿ, ಪ್ರಸ್ತುತ ಹಿಂದೂ ಸಮಾಜದ ಮೇಲೆ ಅನೇಕ ರೀತಿ ಆಘಾತಗಳಾಗುತ್ತಿವೆ. ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಮಾಯಕ ಹಿಂದೂಗಳ ಮೇಲೆ ದೌರ್ಜನ್ಯವೆಸಗಿದ ಘಟನೆಗಳು ಬೆಳಕಿಗೆ ಬಂದಿವೆ, ಇತ್ತೀಚೆಗೆ ಮಂಡ್ಯದಲ್ಲಿ ಮತಾಂಧರು ಗೋಹತ್ಯೆ ಮಾಡುತ್ತಿರುವಾಗ ಅನೇಕ ಹಿಂದೂಗಳು ಗೋರಕ್ಷಣೆ ಮಾಡಲು ಮುಂದಾದರೆ ಪೊಲೀಸರು ಗೋರಕ್ಷಕರನ್ನೇ ಬಂಧಿಸಿದರು. ವಕ್ಫ್ ಕಾನೂನಿನ ವಿರುದ್ಧ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಮತಾಂಧರು ಗಲಭೆಗಳನ್ನು ನಡೆಸಿದರು. ಇದರಲ್ಲಿ ಪೊಲೀಸರ ಮೇಲೂ ಆಕ್ರಮಣ ಮಾಡಲಾಯಿತು, ಹಾಗೆಯೇ ಹಿಂದೂಗಳ ಮನೆಗಳು, ಅಂಗಡಿಗಳನ್ನು ಸುಡಲಾಯಿತು. ಉತ್ತರಪ್ರದೇಶ, ರಾಜಸ್ಥಾನ ಹಿಂದೂಗಳ ಧಾರ್ಮಿಕ ಮೆರವಣಿಗೆಗಳ ಮೇಲೆ ಮತಾಂಧರು ಕಲ್ಲು ತೂರಿ ಹಿಂಸಾಚಾರ ನಡೆಸಿದರು. ಒಟ್ಟಾರೆ ಅಂಶವೇನೆಂದರೆ, ಭಾರತದ ಮೇಲೆ ಆಂತರಿಕ ಮತ್ತು ಬಾಹ್ಯ ಶತ್ರುಗಳಿಂದ ನಡೆಯುತ್ತಿರುವ ಆಕ್ರಮಣಗಳು ಕೇವಲ ವಿಸ್ತರಣಾವಾದಕ್ಕಾಗಿ ಅಲ್ಲ, ಬದಲಾಗಿ ಹಿಂದೂ ಧರ್ಮವನ್ನು ನಾಶಪಡಿಸಲು ನಡೆಯುತ್ತಿವೆ. ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ‘ದೇಶ’ ಕೇಳಿ ಗುಂಡು ಹಾರಿಸದೆ, ‘ಧರ್ಮ’ ಕೇಳಿ ಗುಂಡು ಹಾರಿಸಿದರು. ಇನ್ನು ನಮ್ಮ ಮುಂದೆ ಲವ್ ಜಿಹಾದ್, ಲ್ಯಾಂಡ್ ಜಿಹಾದ್, ಮತಾಂತರದಂತಹ ಅನೇಕ ಸಮಸ್ಯೆಗಳು ಇವೆ. ಇದೆಲ್ಲವನ್ನು ನೋಡಿದಾಗ ಹಿಂದೆ ಪ್ರಭು ಶ್ರೀರಾಮರ ಕಾಲದಲ್ಲಿ, ಶಿವಾಜಿ ಮಹಾರಾಜರ ಕಾಲದಲ್ಲಿ, ಹಕ್ಕ ಬುಕ್ಕರ ಕಾಲದಲ್ಲಿ ಇದೇ ರೀತಿ ಧರ್ಮಸಂಕಟಗಳು ಎದುರಿಗಿದ್ದವು. ಈ ಎಲ್ಲ ಸಂದರ್ಭಗಳಲ್ಲಿಯೂ ಅವರು ಗುರುಗಳ ಮಾರ್ಗದರ್ಶನ ಪಡೆದು ಧರ್ಮಸಂಸ್ಥಾಪನೆಯ ಕಾರ್ಯ ಮಾಡಿದ್ದಾರೆ. ಹಾಗಾಗಿ ಗುರುಶಿಷ್ಯ ಪರಂಪರೆಗೆ ಹಿಂದಿನಿಂದಲೂ ಅಷ್ಟೇ ಮಹತ್ವವಿದೆ. ಈಗ ನಾವೂ ಸಹ ಇಂದಿನ ಗುರುಪೂರ್ಣಿಮೆಯ ದಿನ ಧರ್ಮಸಂಸ್ಥಾಪನೆಗಾಗಿ ಸಂಘಟಿತರಾಗಲು ಸಂಕಲ್ಪ ಮಾಡಬೇಕಿದೆ ಎಂದರು.

       ಮುಖ್ಯ ವಕ್ತಾರರಾದ ಬ್ರಹ್ಮಾವರದ ಅಡ್ವೊಕೇಟ್ ಶ್ರೀ ನಾಗರಾಜ  ಇವರು ಮಾತನಾಡಿ, ಪ್ರತಿ ಒಬ್ಬರಲ್ಲೂ ಸಂಸ್ಕಾರ, ಸಂಸ್ಕೃತಿ ಹಾಗೂ ಧರ್ಮಾಚರಣೆ ಬಹಳ ಮುಖ್ಯ. ಹಾಗೂ ನಮ್ಮ ಧರ್ಮ ರಕ್ಷಣೆ ಮಾಡುವುದು ಪ್ರತೀಯೊಬ್ಬ ಹಿಂದೂವಿನ ಕರ್ತವ್ಯವಾಗಿದೆ. ಧರ್ಮಾಚರಣೆಯಿಂದ ಒಬ್ಬನ ವ್ಯಕ್ತಿಗತ ಹಾಗೂ ಸಮಾಜದ ಉನ್ನತಿ ಆಗುತ್ತದೆ ಎಂದರು.

       ಈ ಸಂಧರ್ಭದಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಮತ್ತು ಪೂ. ಸಂದೀಪ ಗಜಾನನ ಆಳಸಿ ಇವರುಗಳಿಂದ ರಚಿತವಾದ ಇ-ಬುಕ್ “ಅಧ್ಯಾತ್ಮದ ಪ್ರಾಸ್ತಾವಿಕ ವಿವೇಚನೆ” ಬಿಡುಗಡೆ ಮಾಡಲಾಯಿತು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_imgspot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page