
ಉಡುಪಿ: ನಗರದ ಕೋರ್ಟ್ ರಸ್ತೆ ಸಮೀಪ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಕೊಳ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮಾಹಿತಿಯ ಪ್ರಕಾರ, ಲಕ್ಷ್ಮೀ ಕೊಳ ಅವರು ರಸ್ತೆ ಬದಿಯಲ್ಲಿ ನಡೆದುಕೊಂಡು ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಬಳಿಕ ಬಸ್‌ನ ಚಕ್ರ ಮೈಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು ಬಿಜೆಪಿ ಮುಖಂಡ ಮಂಜು ಕೊಳ ಅವರ ಪತ್ನಿಯಾಗಿದ್ದರು.
ಈ ದುರ್ಘಟನೆ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.























































