24.3 C
Udupi
Friday, March 13, 2026
spot_img
spot_img
HomeBlogಎಲ್‌ಪಿಜಿ ಕೊರತೆ ಕುರಿತು ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಲ್‌ಪಿಜಿ ಕೊರತೆ ಕುರಿತು ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಹೊಸದಿಲ್ಲಿ: ದೇಶದ ವಿವಿಧ ಭಾಗಗಳಲ್ಲಿ ಎಲ್‌ಪಿಜಿ ಪೂರೈಕೆಯಲ್ಲಿ ಉಂಟಾಗಿರುವ ಕೊರತೆ ಕುರಿತು ಜನರಲ್ಲಿ ಆತಂಕ ಹೆಚ್ಚುತ್ತಿರುವ ಹಿನ್ನೆಲೆ, ಕಾಂಗ್ರೆಸ್ ನಾಯಕ Rahul Gandhi ಅವರು ಪ್ರಧಾನಿ Narendra Modi ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಎಲ್‌ಪಿಜಿ ಕೊರತೆಯನ್ನು ವಿರೋಧಿಸಿ ಗುರುವಾರ ನಡೆದ ಪ್ರತಿಭಟನೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಎಲ್‌ಪಿಜಿ ಪೂರೈಕೆಯ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಧಾನಿ ಹೇಳುತ್ತಿರುವುದಾದರೂ, ವಾಸ್ತವದಲ್ಲಿ ಬೇರೆ ಕಾರಣಗಳಿಂದಲೇ ಅವರು ಆತಂಕದಲ್ಲಿದ್ದಾರೆ. ಅಮೆರಿಕದಲ್ಲಿ ನಡೆದಿರುವ ಆದಾನಿ ಪ್ರಕರಣ ಹಾಗೂ ‘ಎಕ್ಸ್‌ಪ್ಲೇನ್ ಪ್ಲಸ್’ ಹಗರಣಗಳ ಹಿನ್ನೆಲೆಯಲ್ಲಿ ಪ್ರಧಾನಿ ಭಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಹಾಗೂ Priyanka Gandhi Vadra ಸೇರಿದಂತೆ ಹಲವು ವಿರೋಧ ಪಕ್ಷದ ಸಂಸದರು ಪಾಲ್ಗೊಂಡಿದ್ದು ಸಂಸತ್ ಭವನ ಸಂಕೀರ್ಣದ ಬಳಿ ನಡೆದ ಪ್ರತಿಭಟನೆಯಲ್ಲಿ ಮಹಿಳಾ ಸಂಸದರು ಒಲೆ ಮುಂದೆ ಕುಳಿತು ಪ್ರತಿಭಟನೆ ನಡೆಸಿದರು. ಇದರಲ್ಲಿ ವಿವಿಧ ಪಕ್ಷಗಳ ಸಂಸದರು ಭಾಗವಹಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page