
ನವದೆಹಲಿ: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ 2 ರೂ. ಏರಿಕೆ ಬಳಿಕ ಎಲ್‌ಪಿಜಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಿಸುವುದಾಗಿ ಅಧಿಕೃತ ಘೋಷಣೆ ಹೊರಡಿಸಿದ್ದಾರೆ.
ಅನಿಲ ಕಂಪನಿಗಳು ಸಿಲಿಂಡರ್ ಬೆಲೆ ಹೆಚ್ಚಿಸುವುದಾಗಿ ತಿಳಿಸಿದ್ದು ಹೀಗಾಗಿ ಪ್ರತಿ ಎಲ್‌ಪಿಜಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳವಾಗಲಿದೆ. ಉಜ್ವಲ ಮತ್ತು ಉಜ್ವಲೇತರ ಗ್ರಾಹಕರಿಗೂ ಬೆಲೆ ಏರಿಕೆ ಅನ್ವಯವಾಗಲಿದ್ದು ಆದ್ದರಿಂದ ಇನ್ಮುಂದೆ ಉಜ್ವಲ ಯೋಜನೆಯ 503 ರೂ. ಪಾವತಿಸುತ್ತಿದ್ದ ಸಿಲಿಂಡರ್‌ಗೆ 553 ರೂ. ಹಾಗೂ ಇತರೇ ಗ್ರಾಹಕರು 803 ರೂ. ಪಾವತಿಸುತ್ತಿದ್ದ ಸಿಲಿಂಡರ್‌ಗೆ 853 ರೂ. ಪಾವತಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು.





















