ಬಿಜೆಪಿ ಆರೋಪದ ಬಗ್ಗೆ ಚರ್ಚೆಗೆ ನಾ ರೆಡಿ: ಖಾhngದರ್ ಸವಾಲು

b
ಮಾಜಿ ಸ್ಪೀಕರ್ ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾಡಿದ್ದ ಭ್ರಷ್ಟಾಚಾರ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿ ಈ ಬಗ್ಗೆ ಸಕಾರಾತ್ಮಕ ಚರ್ಚೆಗೂ ಸಿದ್ಧನಿದ್ದೇನೆ. ಯಾವ ಸಂಶಯದ ಬಗ್ಗೆ ಏನೇ ಕೇಳುವುದಿದ್ದರೂ ಲಿಖಿತವಾಗಿಯೇ ಕೊಡಬೇಕು. ಎಲ್ಲರೂ ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು. ಲಿಖಿತವಾಗಿ ಏನನ್ನು ನೀಡುತ್ತಾರೋ ಅದರ ಬಗ್ಗೆ ಮಾತ್ರ ವಿಚಾರ ಮಾಡುತ್ತೇನೆ. ಎಲ್ಲಿಯೋ ಕುಳಿತು ಆರೋಪ ಮಾಡಿದರೆ ಅದಕ್ಕೆ ಉತ್ತರ ಕೊಡಲು ಆಗಲ್ಲ, ಲಿಖಿತವಾಗಿ ನೀಡಿದರೆ ಮಾತ್ರ ಉತ್ತರ ಕೊಡುತ್ತೇನೆ. ತನಿಖೆಗೆ ಕೊಡಬೇಕೋ, ಬೇಡವೊ ಎಂದು ತೀರ್ಮಾನ ಮಾಡುತ್ತೇನೆ’ ಎಂದು ಹೇಳಿದರು.
ರಾಜಕೀಯ ವ್ಯಕ್ತಿಗಳು ಏನೂ ಬೇಕಾದರೂ ಆರೋಪ ಮಾಡಬಹುದು. ಅದೇ ರೀತಿ ನನಗೂ ಬಹಳಷ್ಟು ಹೇಳುವುದಕ್ಕಿದೆ. ಆದರೆ, ಸಂವಿಧಾನಬದ್ಧ ಸ್ಪೀಕರ್ ಸ್ಥಾನದಲ್ಲಿದ್ದು ಆ ರೀತಿ ಮಾತನಾಡಲು ಆಗಲ್ಲ. ನಾನೀಗ ಪ್ರತಿಪಕ್ಷದ ಮಿತ್ರ. ನಮ್ಮ ಶಾಸಕರಿಗೆ ಏನೆಲ್ಲ ಒಳ್ಳೆಯದಾಗಬೇಕು, ಯಾವುದೆಲ್ಲ ಸವಲತ್ತು ಕೊಡಬೇಕೋ ಅದನ್ನು ಕೊಡುವುದು ನನ್ನ ಕರ್ತವ್ಯ. ಅದನ್ನೇ ಮಾಡುತ್ತಿದ್ದು, ಮುಂದೆ ಕೂಡ ಅದನ್ನೇ ಮಾಡುತ್ತೇನೆ. ಇಂತಹ ಆರೋಪ ಮಾಡಿ ನನಗೆ ಡ್ಯಾಮೇಜ್ ಮಾಡಿದರೆ ಅದರಿಂದ ಅವರಿಗೆ ಸಂತೋಷ ಆಗುವುದಾದರೆ ಆಗಲಿ. ದಿನವೂ ಒಂದೊಂದು ಮಾತನಾಡಲಿ. ನನಗೆ ಯಾವುದೇ ಬೇಸರ ಇಲ್ಲ’ ಎಂದರು.



















































