31.8 C
Udupi
Thursday, April 23, 2026
spot_img
spot_img
HomeBlogಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಜ್ಞಾನಸುಧಾದ ಸ್ವಸ್ತಿ ಕಾಮತ್ ರಾಜ್ಯಕ್ಕೆ ಪ್ರಥಮ

ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಜ್ಞಾನಸುಧಾದ ಸ್ವಸ್ತಿ ಕಾಮತ್ ರಾಜ್ಯಕ್ಕೆ ಪ್ರಥಮ

2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಣಿತನಗರದ ಸ್ವಸ್ತಿ ಕಾಮತ್ 625 ರಲ್ಲಿ 625 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ಲಿಖಿತ್ ಡಿ ಶೆಟ್ಟಿ 621 ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನ ಹಾಗೂ ರಾಜ್ಯಕ್ಕೆ ಐದನೇ ಸ್ಥಾನ,ಮಿಶಾಲ್ ಅಸ್ಸಾದಿ ಮತ್ತು ವೇದಿಕಾ 620 ಅಂಕಗಳೊಂದಿಗೆ ಶಾಲೆಗೆ ತೃತೀಯ ಹಾಗೂ ರಾಜ್ಯಕ್ಕೆ ಆರನೇ ಸ್ಥಾನ ಪಡೆದುಕೊಂಡಿರುತ್ತಾರೆ.

ರಾಜ್ಯಮಟ್ಟದ ಮೊದಲ ಹತ್ತು ಸ್ಥಾನಗಳಲ್ಲಿ ಸಂಸ್ಥೆಯ 15 ವಿದ್ಯಾರ್ಥಿಗಳು
ಗುರುತಿಸಿಕೊಂಡಿರುತ್ತಾರೆ.ಪರೀಕ್ಷೆಗೆ ಹಾಜರಾದ 107 ವಿದ್ಯಾರ್ಥಿಗಳಲ್ಲಿ 19 ವಿದ್ಯಾರ್ಥಿಗಳು 613 (98%) ಕ್ಕಿಂತ ಅಧಿಕ ಅಂಕಗಳನ್ನು, 41 ವಿದ್ಯಾರ್ಥಿಗಳು 600 (96%) ಕ್ಕೂ ಹೆಚ್ಚು ಅಂಕಗಳನ್ನು, 43 ವಿದ್ಯಾರ್ಥಿಗಳು 595 (95%) ಕ್ಕಿಂತ ಅಧಿಕ ಅಂಕಗಳನ್ನು
ಗಳಿಸಿರುತ್ತಾರೆ. 75 (70.09%) ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. 89 ಉತ್ತರಪತ್ರಿಕೆಗಳಲ್ಲಿ 100 ಕ್ಕೆ 100 ಅಂಕಗಳ ಸಾಧನೆ ಮಾಡಿರುತ್ತಾರೆ.

ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು,
ಟ್ರಸ್ಟಿಗಳು, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು ಹಾಗೂ
ಶಿಕ್ಷಕರು ಅಭಿನಂದಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page