
ಎಸ್ ವಿ ಟಿ ಸಮೂಹ ಶಿಕ್ಷಣ ಸಂಸ್ಥೆಗಳ ಯಕ್ಷಗಾನ ಕೇಂದ್ರದ ಉಚಿತ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಎಸ್ ವಿ ಎಜ್ಯುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಕೆ ಪಿ ಶೆಣೈ ಅಧ್ಯಕ್ಷತೆ ವಹಿಸಿ ಉದ್ಘಾಟನೆಯನ್ನು ನೆರವೇರಿಸಿದರು.
ಯಕ್ಷಗಾನ ಕೇಂದ್ರದ ನಿರ್ದೇಶಕರಾದ ಎಸ್ ರಾಮ್ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿ ಎಸ್ ವಿ ಟಿ ವಿದ್ಯಾ ಸಂಸ್ಥೆಯಲ್ಲಿ ಯಕ್ಷಗಾನ ನಡೆದು ಬಂದ ರೀತಿಯನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಹಿರಿಯ ಸಹ ಶಿಕ್ಷಕರಾದ ಯೋಗೇಂದ್ರ ನಾಯಕ್, ಆಂಗ್ಲ ಮಾಧ್ಯಮದ ಮುಖ್ಯೋಪಾಧ್ಯಾಯಿನಿ ಮಾಲಿನಿ ಕೆ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಹೆಚ್. ಜಿ ಬಂಡಿವಡ್ಡರ್ ಉಪಸ್ಥಿತರಿದ್ದರು.
ಕೇಂದ್ರದ ಗುರುಗಳಾದ ಅಜಿತ್ ಕುಮಾರ್ ಜೈನ್ ವಂದಿಸಿದರು. ಶಿಕ್ಷಕ ಸುನಿಲ್ ಎಸ್ ಶೆಟ್ಟಿ ಸ್ವಾಗತಿಸಿದರು. ದೇವದಾಸ್ ಕೆರೆಮನೆ ನಿರೂಪಿಸಿದರು.


































