25.1 C
Udupi
Friday, April 3, 2026
spot_img
spot_img
HomeBlogಏಕಾಏಕಿ ಎಲ್ಲರನ್ನೂ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ

ಏಕಾಏಕಿ ಎಲ್ಲರನ್ನೂ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ

spot_imgspot_img

ಪ್ರಮೋದ್ ಶೆಟ್ಟಿ ಹೇಳಿದ್ದೇನು?

ಸೋಷಿಯಲ್ ಮೀಡಿಯಾದಲ್ಲಿ ಕಳೆದ ಕೆಲ ದಿನಗಳಿಂದ ನಟ ರಿಷಭ್ ಶೆಟ್ಟಿ ಅವರ ಇನ್‌ಸ್ಟಾಗ್ರಾಮ್ ಚಟುವಟಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಾಂತಾರ ಚಿತ್ರದ ಬಳಿಕ ಹಂತ ಹಂತವಾಗಿ ಅನ್ಫಾಲೋ ಮಾಡುತ್ತಿದ್ದ ಅವರು, ಇದೀಗ ಮೂವರನ್ನು ಹೊರತುಪಡಿಸಿ ಉಳಿದ ಎಲ್ಲರನ್ನೂ ಅನ್ಫಾಲೋ ಮಾಡಿರುವುದು ಗಮನಸೆಳೆದಿದೆ.

ಪತ್ನಿ ಪ್ರಗತಿ ಶೆಟ್ಟಿ, ರಿಷಬ್ ಶೆಟ್ಟಿ ಫಿಲ್ಮ್ಸ್ ಹಾಗೂ ರಿಷಬ್ ಶೆಟ್ಟಿ ಫೌಂಡೇಷನ್ ಖಾತೆಗಳನ್ನು ಮಾತ್ರ ಉಳಿಸಿಕೊಂಡಿರುವುದು ನೆಟ್ಟಿಗರಲ್ಲಿ ಕುತೂಹಲ ಹುಟ್ಟಿಸಿದೆ. ಯಾವುದೇ ಸ್ಪಷ್ಟನೆ ನೀಡದೇ ಏಕಾಏಕಿ ತೆಗೆದುಕೊಂಡ ಈ ನಿರ್ಧಾರ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ಈ ಬಗ್ಗೆ ನಟ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ ನೀಡಿ, ಈ ವಿಚಾರವನ್ನು ತಾನೂ ನಂತರವೇ ಗಮನಿಸಿದ್ದಾಗಿ ಹೇಳಿದ್ದಾರೆ. ರಿಷಬ್ ಶೆಟ್ಟಿ ಯಾಕೆ ಹೀಗೆ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ, ಆದರೆ ವೃತ್ತಿಜೀವನದಲ್ಲಿ ಬೆಳವಣಿಗೆ ಆಗುತ್ತಿದ್ದಂತೆ ಸೋಷಿಯಲ್ ಮೀಡಿಯಾ ನಿರ್ವಹಣೆಯಲ್ಲೂ ಬದಲಾವಣೆಗಳು ಸಹಜ ಎಂದು ತಿಳಿಸಿದ್ದಾರೆ.

ಮುಂದೆ ಏಜೆನ್ಸಿಗಳು ಅಥವಾ ತಂಡಗಳು ಸಾಮಾಜಿಕ ಜಾಲತಾಣಗಳನ್ನು ಹ್ಯಾಂಡಲ್ ಮಾಡುವ ಸಂದರ್ಭಗಳಲ್ಲಿ ಇಂತಹ ನಿರ್ಧಾರಗಳು ಸಾಮಾನ್ಯವಾಗಿರಬಹುದು. ಸ್ಟ್ರಾಟಜಿ ಭಾಗವಾಗಿಯೂ ಇದು ಇರಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page